ದೊಡ್ಡಬಳ್ಳಾಪುರದಲ್ಲಿ ಕಾರ್ಯಕರ್ತರ ಖುಷಿ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಕೇಂದ್ರ ಸಚಿವ ಎಂ.ವೀರಪ್ಪಮೊಯ್ಲಿ ಸತತ 2 ನೇ ಬಾರಿಗೆ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಶಾಸಕ ಟಿ.ವೆಂಕಟರಮಣಯ್ಯ ಜವಾಜಿ ಸೀತಾರಾಂ, ಚುಂಚೇಗೌಡ, ರವಿ, ಬೈರೇಗೌಡ, ಸುನಿಲ್ಕುಮಾರ್, ಯೋಗಾ ನಟರಾಜ್, ಎಚ್.ಎಸ್.ರೇವತಿ ಅನಂತರಾಂ ಸೇರಿ ಅನೇಕರಿದ್ದರು.