ವಾಗ್ವಾದ
ಮೈಸೂರು: ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸುತ್ತಿದ್ದರ ಫಲವಾಗಿ ನೃತ್ಯ, ಕೇಕೆ, ಘೋಷಣೆ ಮೂಲಕ ಸಂಭ್ರಮಾಚರಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ದಾಟಿ ಒಳಾವರಣಕ್ಕೆ ಬಂದರು. ಇದಕ್ಕೆ ಅಲ್ಲಿದ್ದ ಪೊಲೀಸರು ತಡೆಯೊಡ್ಡಿದ್ದರಿಂದ ಕೆಲಕಾಲ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಮೇಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಸಿಗೊಳಿಸಿದರು.
ಪೊಲೀಸ್ ಪೇದೆಗೆ ಗಾಯ
ಚಿಂತಾಮಣಿ: ಚುನಾವಣಾ ಕರ್ತವ್ಯ ಮುಗಿಸಿಕೊಂಡು ಹಿಂತಿರುಗಿ ಬರುತ್ತಿರುವಾಗ ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡ ಬಂದ ಪರಿಣಾಮ ಪೋಲೀಸ್ ಪೇದೆ ಕೆಳಗೆ ಬಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಶೆಟ್ಟಿಮಾದಮಂಗಲದಲ್ಲಿ ನಡೆದಿದೆ. ತಾಲೂಕಿನ ಬಟ್ಲಹಳ್ಳಿ ಪೋಲೀಸ್ ಠಾಣೆಯ ಪೇದೆ ಲೋಕಸಭಾ ಮತ ಎಣಿಕೆಯ ಬಂದೊಬಸ್ತ್ ಕರ್ತವ್ಯ ಮುಗಿಸಿಕೊಂಡು ತಮ್ಮ ದ್ವಿಚಕ್ರ ವಾಹನದಲ್ಲಿ ಹಿಂತಿರುಗಿ ಶೆಟ್ಟಿಮಾದಮಂಗಲ ಬರುತ್ತಿದ್ದಂತೆ ಬೀದಿ ನಾಯಿಯೊಂದು ಅಡ್ಡ ಬಂದಿದೆ. ಆಗ ಪೇದೆ ಪ್ರಕಾಶ್ ಕೆಳಗೆ ಬಿದ್ದಿದ್ದಾರೆ. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.