ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಬೋಧನಾ ತರಬೇತಿ
ಚಿಂತಾಮಣಿ: ತಾಲೂಕು ಕನ್ನಡ ಸಾಹಿತ್ಯ ವೇದಿಕೆ, ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಸಿರಿಗನ್ನಡ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಬೋಧನಾ ತರಗತಿಗಳನ್ನು ನಗರದ ಮಹಾತ್ಮ ಗಾಂಧಿ ಬಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೇ 23ರಿಂದ ಆರಂಭಿಸಲಾಗುವುದು ಎಂದು ಚುಸಾಪ ಪ್ರಧಾನ ಸಂಚಾಲಕ ಎಸ್.ಸಿ.ಶ್ರೀನಿವಾಸರೆಡ್ಡಿ ಅವರು ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಮೇ 23 ರಂದು ಬೆಳಿಗ್ಗೆ 10 ಗಂಟೆಗೆ ಅಂಕಪಟ್ಟಿಯ ಇಂಟರ್‌ನೆಟ್ ಪ್ರತಿಯ ಸಹಿತ ತಮ್ಮ ಪೋಷಕರೊಂದಿಗೆ ಹಾಜರಾಗಿ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ತರಗತಿಗಳು ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೂ ನಡೆಯಲಿದ್ದು, ನುರಿತ ಹಾಗೂ ಅನುಭವಿ ಶಿಕ್ಷಕರು ಬೋಧಿಸಲಿದ್ದು, ಅನುತ್ತೀರ್ಣ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು. ಹೆಚ್ಚಿನ ಮಾಹಿತಿಗೆ 9449378416,8553932228 ಗೆ ಸಂಪರ್ಕಿಸಬಹುದು.