ಚೌಡೇಶ್ವರಿ ಪ್ರೌಢಶಾಲೆಗೆ ಶೇ.97 ಫಲಿತಾಂಶ
ಕೋಲಾರ: ಅಮ್ಮನಲ್ಲೂರು ಗ್ರಾಮದಲ್ಲಿರುವ ಶ್ರೀ ಚೌಡೇಶ್ವರಿ ಪ್ರೌಢಶಾಲೆಯು ಪ್ರಸಕ್ತ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ.97 ರಷ್ಟು ಫಲಿತಾಂಶ ಲಭಿಸಿದೆ ಎಂದು ಮುಖ್ಯೋಪಾಧ್ಯಾಯ ಟಿ.ಮುನಿವೆಂಕಟಸ್ವಾಮಿ ತಿಳಿಸಿದ್ದಾರೆ. ಒಟ್ಟು 94 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ ಅತ್ಯುನ್ನತ ಶ್ರೇಣಿ-5 ವಿದ್ಯಾರ್ಥಿಗಳು, 38 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 23, ದ್ವಿತೀಯ 25 ದರ್ಜೆಯಲ್ಲಿ ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಪ್ರತಿಷ್ಠಾಪನಾ ಮಹೋತ್ಸವ ನಾಳೆ
ಕೆಜಿಎಫ್: ಪಾರಂಡಹಳ್ಳಿ ರಸ್ತೆಯಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಮೇ19 ರಂದು ಸೋಮವಾರ ಬೆಳಗ್ಗೆ ಶ್ರೀ ವಳ್ಳಿ ದೇವಯಾನಿ ಸಮೇತ ಶ್ರೀ ಸುಬ್ರಹ್ಮಣ್ಯಸ್ವಾಮಿ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ. ದೇವಸ್ಥಾನದಲ್ಲಿ ಗಂಗೆಪೂಜೆ, ಗೋಮಹಾಲಕ್ಷ್ಮೀ ಪೂಜೆ, ಯಾಗಮಂಟಪ ಪ್ರವೇಶ, ಮಹಾಗಣಪತಿ ಪೂಜೆ, ಕಲಶ ಸ್ಥಾಪನೆ, ಸ್ವಾಮಿಗೆ ಅರಿವಾಸಗಳು, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ವಿವಿಧ ಹೋಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ದೇವಸ್ಥಾನದ ಸಮಿತಿ ತಿಳಿಸಿದೆ.