ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮಕ್ಕಳಿಗೆ ಬೇಸಿಗೆ ಶಿಬಿರಗಳಿಂದ ಉಪಯೋಗ

Rashmi Kasaragodu
Updated On : 18 May 2014, 12:56 pm


ಕೋಲಾರ: ಬೇಸಿಗೆ ಶಿಬಿರಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನಗೊಳ್ಳುವುದರ ಜೊತೆಗೆ ಕಲಿಕೆಗೆ ಸಹಕಾರಿಯಾಗುತ್ತದೆ ಎಂದು ಗಾನಸುಧಾ ಸಾಂಸ್ಕೃತಿಕ ಕಲಾ ಸಂಸ್ಥೆಯ ಅಧ್ಯಕ್ಷ ಕೆ.ಗೌತಮ್ ಹೇಳಿದರು. ಮಾಲೂರು ತಾಲೂಕಿನ ಜಯಮಂಗಲ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದಲ್ಲಿ ಆಯೋಜಿಸಿಲಾಗಿದ್ದ ಉಪನ್ಯಾಸ ನೀಡಿ,  ಈ ಹಿಂದೆ ಬೇಸಿಗೆ ಶಿಬಿರಗಳು ಎಂದರೆ ಏನೋ ಅಂತ ಆಶ್ಚರ್ಯಕರವಾಗಿ ನೋಡುತ್ತಿದ್ದವರು ಈಗ ಮಕ್ಕಳನ್ನು ಬೇಸಿಗೆ ಶಿಬಿರಗಳಿಗೆ ಕಳುಹಿಸುತ್ತಿದ್ದಾರೆ ಎಂದರು. ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಗ್ರಾಪಂ ಕಾರ್ಯದರ್ಶಿ ರಮೇಶ್, 'ಸಂಗೀತಕ್ಕೆ ತನ್ನದೇ ಆದ ಮಹತ್ವವಿದೆ. ಸಂಗೀತಕ್ಕೆ ಜಾತಿ, ಮತ ಬೇಧವಿಲ್ಲದೆ ಎಲ್ಲರನ್ನೂ ಒಂದೆಡೆ ಸೇರಿಸುವ ಮಹತ್ತರವಾದ ಶಕ್ತಿಯಿದೆಟ ಎಂದರು. ಶಿಬಿರದಲ್ಲಿ ಆದಿಮ ಹರೀಶ್ ಕುಮಾರ್ ಅವರು ಮಕ್ಕಳಿಗೆ ಜಾನಪದ ಕಲೆಗಳ ಬಗ್ಗೆ ಅರಿವು ಮೂಡಿಸಿದರು.  ಮುಖ್ಯೋಪಾಧ್ಯಾಯ ಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಾಬು, ಎಸ್.ಆನಂದ್, ಸುನೀಲ್, ಕುಮಾರ್, ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement