ಮುನಿಯಪ್ಪ ಗೆಲವಿಗೆ ಶಾಸಕ ವರ್ತೂರ್ ಹರ್ಷ
ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ ಅವರ ಗೆಲವಿಗೆ ಶಾಸಕ ವರ್ತೂರ್ ಪ್ರಕಾಶ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜನಪರ ಕಾರ್ಯಕ್ರಮಗಳು ಮತ್ತು ಅಹಿಂದ ವರ್ಗದ ಮತಗಳು ಹಾಗೂ ಮುನಿಯಪ್ಪ ಅವರ ಅಭಿವೃದ್ಧಿ ಕೆಲಸಗಳು ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಹೇಳಿದ್ದಾರೆ. ಕಳೆದ ಬಾರಿ ಜಾರಿಗೆ ತಂದಿರುವ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಹಾಗೂ ಜಿಲ್ಲೆಗೆ ಶಾಶ್ವತ ಕುಡಿಯುವ ನೀರು ಯೋಜನೆಯನ್ನು ಸಾಕಾರಗೊಳಿಸಲು ಸಂಸದರು ಶ್ರಮಿಸಲಿ ಎಂದು ಮನವಿ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಲೀಡ್ ತಂದುಕೊಡುವಲ್ಲಿ ಶ್ರಮಿಸಿದ್ದೇನೆಂದು ತಿಳಿಸಿದ್ದಾರೆ.