ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ದುಬಾರಿ ಶುಲ್ಕ ವಸೂಲಿ: ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಪರಿಶೀಲನೆ

Mainashree
Updated On : 24 May 2014, 12:18 pm

ಶಿಡ್ಲಘಟ್ಟ: ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥ್ ರೆಡ್ಡಿ ಹಾಗೂ ಡಿವೈಎಫ್‌ಐ ರಾಜ್ಯ ಮುಖಂಡ ಮುನೀಂದ್ರ ಭೇಟಿ ಪರಿಶೀಲಿಸಿದರು.
ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ದಾಖಲಾತಿ ಆರಂಭವಾಗಿದ್ದು, ಖಾಸಗಿ ಶಾಲೆಗಳು ಡೊನೇಷನ್ ರೂಪದಲ್ಲಿ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಶಾಲೆಗೆ ಭೇಟಿ ನೀಡುತ್ತಿದ್ದಾರೆ.
ಈ ವೇಳೆ ಮಾತನಾಡಿದ ಕ್ಷೇತ್ರ ಶಿಕ್ಷಣಾದಿಕಾರಿ ರಘುನಾಥ ರೆಡ್ಡಿ, ಶಾಲೆಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶವನ್ನು ಪರಿಪಾಲಿಸಲಾಗುತ್ತಿದೆಯೇ ಎಂಬುದನ್ನು ಗಮನಿಸಲಾಗುತ್ತಿದೆ. ನಿಗದಿತ ಸಮಯಕ್ಕೆ ಮುಂಚೆ ಪ್ರವೇಶ ಮಾಡಿಕೊಳ್ಳುವುದು ಕಂಡು ಬಂದಲ್ಲಿ ತಕ್ಕ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುನೀಂದ್ರ ಮಾತನಾಡಿ, ಸರ್ಕಾರದ ಆದೇಶವನ್ನು ದಿಕ್ಕರಿಸಿ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇಂಥ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಡಿವೈಎಫ್‌ಐ ರಾಜ್ಯ ಮುಖಂಡ ಕುಂದಲಗುಕರ್ ಮುನೀಂದ್ರ, ಸದಾನಂದ, ಬಾಬು, ವಾಸು, ಅಪ್ಪು, ವೆಂಕಟೇಶ್ ಸೇರಿದಂತೆ ಅನೇಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement