ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮೇಲ್ಮನೆಗೆ ಅಭ್ಯರ್ಥಿಗಳ ಕಸರತ್ತು

Mainashree
Updated On : 24 May 2014, 12:18 pm

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ನಂತರ ಇದೀಗ ವಿಧಾನಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವಿವಿಧ ಪಕ್ಷಗಳಲ್ಲಿನ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು ಯಶಸ್ವಿಯಾಗಿ ಮತದಾನ ಪ್ರಕ್ರಿಯೆ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ಆಗ್ನೇಯ ಪದವೀಧರ ಕ್ಷೇತ್ರದ ಪ್ರಸಕ್ತ ಅವಧಿಯು ಜೂ.30 ಕ್ಕೆ ಅಂತ್ಯಗೊಳ್ಳಲಿದ್ದು ಚುನಾವಣಾ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು ಚುನಾವಣಾ ಅಧಿಸೂಚನೆ ಮೇ 27 ರಂದು ಹೊರಡಿಸಲಾಗುತ್ತಿದೆ. ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಲು ಜೂ.3 ಕೊನೆಯ ದಿನವಾಗಿದೆ. ಜೂ. 4 ರಂದು ಸಲ್ಲಿಕೆಯಾದ ನಾಮಪತ್ರಗಳನ್ನು ಪರಿಶೀಲಿಸಲಿದ್ದು  ಜೂ.6 ಉಮೇದುವಾರಿಕೆಗಳನ್ನು ಅಭ್ಯರ್ಥಿಗಳು ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ. ಜೂ.20 ರಂದು ಬೆಳಗ್ಗೆ 8 ರಿಂದ ಸಂಜೆ 4 ರ ವರೆಗೆ ಮತದಾನ ನಡೆಯಲಿದ್ದು ಜೂ.24 ರಂದು ಮತ ಎಣಿಕೆ ನಡೆಯಲಿದೆ. ಈಗಾಗಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲಿದ್ದು ಯಾವುದೇ ಶೈಕ್ಷಣಿಕ ಸಂಸ್ಥೆಯ ಅಡಿಗಲ್ಲು ಸಮಾರಂಭ ಅಥವಾ ಪ್ರಾರಂಭೋತ್ಸವ ಸಮಾರಂಭಗಳನ್ನು ಹಮ್ಮಿಕೊಳ್ಳಲು, ಪದವೀಧರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ಸರ್ಕಾರಿ ಯೋಜನೆಯನ್ನು ಘೋಷಿಸಲು, ಜಿಲ್ಲೆಯಲ್ಲಿನ ಚುನಾವಣಾ ಶಾಖೆಯ ಅಧಿಕಾರಿಗಳು ಹಾಗೂ ನೌಕರರನ್ನು ಯಾವುದೇ ಸಂದರ್ಭದಲ್ಲಿ ಯಾವುದೇ ಇಲಾಖಾ ಸಚಿವರು ಯಾವುದೇ ಕಾರಣಕ್ಕೂ ತಾವು ಭಾಗವಹಿಸುವ ಸಭೆಗಳಿಗೆ ಕರೆಸಿಕೊಳ್ಳಲು ಅವಕಾಶವಿಲ್ಲ.
ಇನ್ನೂ ಯಾವುದೇ ಸರ್ಕಾರಿ ನೌಕರ ಸರ್ಕಾರೇತರ ಕೆಲಸದ ಮೇಲೆ ಜಿಲ್ಲೆಗೆ ಬರುವ ಯಾವುದೇ ಸಚಿವರನ್ನು ತನ್ನ ವೈಯಕ್ತಿಕ ಹಿತಾಸಕ್ತಿಗಾಗಿ ಭೇಟಿ ಮಾಡಬಾರದು.ಒಂದು ವೇಳೆ ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಆರ್ .ವಿಶಾಲ್  ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement