ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಚಿಕ್ಕಬಳ್ಳಾಪುರದಲ್ಲಿ ಸಂಭ್ರಮ

Mainashree
Updated On : 27 May 2014, 12:23 pm

ಚಿಕ್ಕಬಳ್ಳಾಪುರ:  ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.  ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ಎಲ್‌ಇಡಿ ಟಿವಿಯಲ್ಲಿ ಮೋದಿ ಪ್ರಮಾಣ ವಚನ ಸ್ವೀಕರಿಸುವ ದೃಶ್ಯವನ್ನು ವೀಕ್ಷಿಸಿದರು. ಪ್ರಮಾಣ ವಚನ ಕಾರ್ಯ ಮುಗಿಯುತ್ತಿದ್ದಂತೆ ಸಿಹಿ ಹಂಚಿದರು. ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ, ಬಿ.ಎನ್.ಬಚ್ಚೇಗೌಡ ಮಾತನಾಡಿದರು. ಮುಖಂಡರಾದ ರಘು, ಡಾ. ಮಂಜುನಾಥ್, ಪ್ರೇಮಲೀಲಾ ವೆಂಕಟೇಶ್, ವರದರಾಜ್, ಲಕ್ಷ್ಮೀನಾರಾಯಣ ಗುಪ್ತ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement