ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

Mainashree
Updated On : 28 May 2014, 12:15 pm

ಬಾಗೇಪಲ್ಲಿ: ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸಬೇಕೆಂದು ಆಗ್ರಹಿಸಿ ತಾಲ್ಲೂಕಿನ ಕಾನಾಗಮಾಕಲಪಲ್ಲಿ ಗ್ರಾ.ಪಂ. ವ್ಯಾಪ್ತಿಯ ನಡುಂಪಲ್ಲಿ ಗ್ರಾಮಸ್ಥರು ಖಾಲಿ ಬಿಂದಿಗೆಗಳನ್ನು ಹಿಡಿದುಕೊಂಡು ಬಂದು ಇಲ್ಲಿನ ಪಂಚಾಯತ್ ರಾಜ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಗ್ರಾಮದಲ್ಲಿ ಒಂದು ವರ್ಷದ ಹಿಂದೆ ಕೊರೆಸಲಾಗಿದ್ದ ಕೊಳವೆ ಬಾವಿಗೆ ಮೋಟಾರ್  ಅಳವಡಿಸಿದ್ದು ಇದು ಕಳಪೆ ಗುಣಮಟ್ಟದಲ್ಲಿರುವುದರಿಂದ ಪದೇ ಪದೇ ಕೆಟ್ಟು ಹೋಗುತ್ತಿದೆ. ಇದರಿಂದ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಇದುವರೆಗೂ ಗ್ರಾ.ಪಂ, ತಾ.ಪಂ ಸೇರಿದಂತೆ ಪಂಚಾಯತ್  ರಾಜ್  ಇಲಾಖೆಗಳ ಯಾಮೊಬ್ಬ ಹಿರಿಯ ಅಧಿಕಾರಿಯೂ ಇಲ್ಲಿಗೆ ಭೇಟಿ ನೀಡಿ ಮೋಟಾರ್  ಯಂತ್ರವನ್ನು ದುರಸ್ಥಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement