ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜ್ಞಾನ ಆಯೋಗದಿಂದ ಶೀಘ್ರ ಸರ್ಕಾರಕ್ಕೆ ವರದಿ

Mainashree
Updated On : 28 May 2014, 12:01 pm

ಕೋಲಾರ: ಕರ್ನಾಟಕ ಜ್ಞಾನ ಆಯೋಗವು ಉನ್ನತ ಶಿಕ್ಷಣದಲ್ಲಿ ಆಗಬೇಕಾಗಿರುವ ಸುಧಾರಣೆಗಳಿಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ, ಒಂದು ವರ್ಷದೊಳಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ತಿಳಿಸಿದರು. ನಗರದ ಇಟಿಸಿಎಂ ಆಸ್ಪತ್ರೆಯಲ್ಲಿ ಮಂಗಳವಾರ ಡಿಮೆಂಶಿಯಾ ಕೇರ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಸುದ್ದಿಗಾರರ ಜತೆ ಮಾನತಾಡಿದ ಅವರು, ಕರ್ನಾಟಕ ಜ್ಞಾನ ಆಯೋಗ ರಚನೆ ಆಗಿದ್ದರೂ ಕಾರ್ಯಕ್ರಮಗಳನ್ನು ರೂಪಿಸಲು ಕಾರಣಾಂತರಗಳಿಂದ ವಿಳಂಬವಾಗಿದೆ. ಆಯೋಗದ ಸದಸ್ಯರು ಮತ್ತು ಅಧಿಕಾರಿಗಳ ಪರಿಚಯ ಸಭೆ ಮಾತ್ರ ನಡೆದಿದೆ. ಅತಿ ಶೀಘ್ರವೇ ಸಭೆಯನ್ನು ಆಯೋಜಿಸಿ ಉನ್ನತ ಶಿಕ್ಷಣದಲ್ಲಿ ಆಗಬೇಕಾಗಿರುವ ಸುಧಾರಣೆಗಳಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಸಮಗ್ರ ವರದಿಯನ್ನು ಸರ್ಕಾರಕ್ಕೆ ನೀಡಲು ಕನಿಷ್ಠ ಒಂದು ವರ್ಷ ಕಾಲಾವಕಾಶ ಬೇಕಾಗುತ್ತದೆ' ಎಂದರು. ಆಯೋಗ ಹಿಂದಿನಂತೆ ತನ್ನ ಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಕಾರ್ಯನಿರ್ವಹಿಸಲಿದೆ. ಸದಸ್ಯರು ಸಹ ಬಹಳ ಉತ್ಸುಕರಾಗಿದ್ದಾರೆ ಇದೇ ತಿಂಗಳ 29, 30ರಂದು ಆಯೋಗ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ನಡವಳಿಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement