ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ದುಬಾರಿ ಶುಲ್ಕ ವಸೂಲಿ: ಎಸ್‌ಎಫ್‌ಐ ಪ್ರತಿಭಟನೆ

Mainashree
Updated On : 28 May 2014, 12:15 pm

ಶಿಡ್ಲಘಟ್ಟ: ಖಾಸಗಿ ಶಾಲೆಗಳಲ್ಲಿ ದುಬಾರಿ ಶುಲ್ಕವನ್ನು ವಸೂಲಿ ಮಾಡುತ್ತಿದ್ದರೂ ಕೂಡಾ ಸ್ಥಳೀಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಎಸ್‌ಎಫ್‌ಐ ಕಾರ್ಯಕರ್ತರು ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಕೋಟೆ ವೃತ್ತದಲ್ಲಿರುವ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಅವರು, ತಾಲೂಕಿನಾದ್ಯಂತ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ದೂರು ಕೊಟ್ಟರೆ, ಅದೇ ದೂರಿನ ಪ್ರತಿಯನ್ನು ತೆಗೆದುಕೊಂಡು ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಮುಂದೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜಿತ್‌ಪ್ರಸಾದ್ ಭೇಟಿ ನೀಡಿ, ದೂರು ಬಂದರೆ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಮಾತನಾಡಿ, ಡೊನೇಷನ್ ಪಡೆಯುವ ಶಾಲೆಗಳಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು. ಕುಂದಲಗುಕರ್ ಮುನೀಂದ್ರ, ಗೆಜ್ಜಿಗಾನಹಳ್ಳಿ ರವಿಕುಮಾರ್, ಶಶಿಕಲಾ, ಬಾಬು, ಸದಾನಂದ, ಅಪ್ಪು, ಮಕ್ಸೂದ್ಹುಸೇನ್, ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement