ಕೊಪ್ಪಳ

ಬೈಪಾಸ್ ನಿರ್ಮಾಣ: ಸಿಎಂ

ಕೊಪ್ಪಳ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೊಪ್ಪಳಕ್ಕೆ ಬೈಪಾಸ್ ರಸ್ತೆ ನಿರ್ಮಿಸುವ ಯೋಜನೆ ಇದೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದ ಶಾಸಕ (ವಿಧಾನಪರಿಷತ್) ಅಮರನಾಥ ಪಾಟೀಲ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಕೊಪ್ಪಳ ನಗರದ ಮಧ್ಯಭಾಗದಲ್ಲಿ ಅಂಕೋಲಾ-ಗುತ್ತಿ ರಾಷ್ಟ್ರೀಯ ಹೆದ್ದಾರಿ 63 ಹಾದು ಹೋಗಿದ್ದು, ನಗರದ ಮುಖ್ಯ ರಸ್ತೆಯೂ ಇದೇ ಆಗಿರುವುದರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಃಏಉಕಿ- ಐಗ ಇ ಯೋಜನೆಯಡಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಆ ಪ್ರಸ್ತಾವನೆಯಲ್ಲಿ ಕೊಪ್ಪಳ ನಗರಕ್ಕೆ ರಿಂಗ್‌ರೋಡ್ ಬದಲಿಗೆ ಬೈಪಾಸ್ ನಿರ್ಮಿಸುವ ಯೋಜನೆ ಸೇರ್ಪಡೆಯಾಗಿದೆ ಎಂಬುದಾಗಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಶಾಸಕ ಅಮರನಾಥ ಪಾಟೀಲ್ ಅವರು ತಿಳಿಸಿದ್ದಾರೆ.
ಇಂದು ಸೇನಾ ರ್ಯಾಲಿ
ಕೊಪ್ಪಳ: ಬಾಗಲಕೋಟೆ ಜಿಲ್ಲೆಯ ಮುಧೋಳದ ರನ್ನ ಸ್ಟೇಡಿಯಂ ಆವರಣದಲ್ಲಿ ಫೆ. 8ರಂದು ಸೈನಿಕ ಸಾಮಾನ್ಯ ಕರ್ತವ್ಯ ಹುದ್ದೆಗಳಿಗೆ ಮಾತ್ರ ಸೇನಾ ಭರ್ತಿ ರ್ಯಾಲಿ ನಡೆಯಲಿದೆ. ಈ ರ್ಯಾಲಿಯಲ್ಲಿ ಕೊಪ್ಪಳ ಜಿಲ್ಲೆಯ ಆಸಕ್ತ ಯುವಕರು ಫೆ. 8ರಂದು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08350-280095ಗೆ ಸಂಪರ್ಕಿಸಬಹುದಾಗಿದೆ ಎಂದು ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಇಂದು ಸಭೆ
ಕೊಪ್ಪಳ: ರಾಜ್ಯ ಕ್ರೀಡಾ ನೀತಿ ರಚನೆಗಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಭಿಪ್ರಾಯ ಸಂಗ್ರಹಿಸಲು ಫೆ. 8ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಭೆಯನ್ನು ಏರ್ಪಸಲಾಗಿದೆ. ಈ ಸಭೆಯಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ರಾಜ್ಯ ರಚನಾ ಸಮಿತಿ ಸದಸ್ಯ ಕೆ.ಎಂ. ಸುರೇಶ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಅಂತರ್‌ರಾಷ್ಟ್ರೀಯ ಅಥ್ಲೀಟ್ ಅರ್ಜುನ ದೇವಯ್ಯ ಉಪಸ್ಥಿತರಿರುವರು. ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿ.ಎನ್. ಘಾಡಿ ತಿಳಿಸಿದ್ದಾರೆ.
ಮಲಹೊರುವ ಪದ್ಧತಿಗೆ ಕಠಿಣ ಶಿಕ್ಷೆಯ ಎಚ್ಚರಿಕೆ
ಕೊಪ್ಪಳ: ಮಲಹೊರುವ ಪದ್ಧತಿಯನ್ನು ನಿಷೇಧಿಸಲಾಗಿದ್ದು, ಇದನ್ನು ಉಲ್ಲಂಘಿಸುವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತೆ ಬಿ.ಎಂ. ಅಶ್ವಿನಿ ಎಚ್ಚರಿಕೆ ನೀಡಿದ್ದಾರೆ. ಎಂಪ್ಲಾಯ್‌ಮೆಂಟ್ ಆಫ್ ಮ್ಯಾನ್ಯುವಲ್ ಸ್ಕಾವೆಂಜಿಂಗ್ ಆ್ಯಂಡ್ ಕನ್‌ಸ್ಟ್ರಕ್ಷನ್ ಆಫ್ ಡ್ರೈಲ್ಯಾಟ್ರಿನ್ (ಪ್ರಾಹಿಬಿಷನ್)ಆ್ಯಕ್ಟ್  1993ರ ಪ್ರಕಾರ ಸೆಪ್ಟಿಕ್ ಟ್ಯಾಂಕ್, ಒಳಚರಂಡಿಗಳ ಸ್ವಚ್ಚತೆಯನ್ನು ಕೆಲಸಗಾರರಿಂದ ಮಾಡಿಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಕಠಿಣ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಸೆಪ್ಟಿಕ್ ಟ್ಯಾಂಕ್ ಹಾಗೂ ಒಳಚರಂಡಿ ಸ್ವಚ್ಚಗೊಳಿಸಲು ಈಗ ಆಧುನಿಕ ಯಂತ್ರಗಳು ಲಭ್ಯವಿದ್ದು ಅದನ್ನು ಸಾರ್ವಜನಿಕರು ಬಳಸಿಕೊಳ್ಳಬಹುದಾಗಿದೆ ಎಂದು ನಗರಸಭೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?