ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೊಪ್ಪಳ

ಹದಿಹರೆಯದ ಗರ್ಭಧಾರಣೆ, ಮದ್ಯವ್ಯಸನ ಬೆಂಗಳೂರಲ್ಲೇ ಹೆಚ್ಚು

Parashurama
Updated On : 10 Feb 2013, 11:26 am

ಕೊಪ್ಪಳ: ಬೆಂಗಳೂರು ಮೊದಲು ನಿವೃತ್ತರ ಸ್ವರ್ಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದೀಗ ಅದು ಸಿಲಿಕಾನ್ ಸಿಟಿ ಎಂಬ ಖ್ಯಾತಿ ಗಳಿಸಿದ್ದು, ಒತ್ತಡದ ಬದುಕು ನಿರ್ವಹಣೆಗೂ ಹೆಸರು ಗಳಿಸಿದೆ. ಇಡೀ ರಾಜ್ಯದಲ್ಲಿ ಹದಿಹರೆಯದ ಗರ್ಭಧಾರಣೆ, ಮದ್ಯವ್ಯಸನ ಹಾಗೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಾಣಸಿಗುವುದು ಬೆಂಗಳೂರಿನಲ್ಲಿಯೇ ಎಂದು ರಾಜ್ಯ ಮಾನಸಿಕ ಆರೋಗ್ಯ ಕಾರ್ಯಪಡೆ ಅಧ್ಯಕ್ಷ ಡಾ. ಅಶೋಕ ಪೈ ಹೇಳಿದರು.
ಕೊಪ್ಪಳದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿಯೇ ಮಾನಸಿಕ ಆರೋಗ್ಯಕ್ಕೆ ಚಿಕಿತ್ಸೆ ನೀಡುವ ಸಿಬ್ಬಂದಿ ಪ್ರಮಾಣ ಗಣನೀಯವಾಗಿ ಕಡಿಮೆ ಇದೆ. ಭಾರತದಲ್ಲಿ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಕಾರ್ಯಪಡೆ ಆರಂಭಿಸುವ ಮೂಲಕ ಹೊಸ ಇತಿಹಾಸ ಬರೆದಿದೆ ಎಂದರು.
ಜಾಗತೀಕರಣದ ಪ್ರಭಾವದಿಂದ ಇಂದಿನ ದಿನಗಳಲ್ಲಿ ಒತ್ತಡದ ಬದುಕು ಅನಿವಾರ್ಯವಾಗಿದೆ. ಮೊದಲು ಒತ್ತಡ ನಿವಾರಣೆಗೆ ಹೇಗೆ ಎಂಬ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮಗಳು ನಡೆಯುತ್ತಿದ್ದವು. ಈಗ ಒತ್ತಡದೊಂದಿಗೆ ಬದುಕು ನಿರ್ವಹಿಸುವುದು ಹೇಗೆ ಎಂಬ ಬಗ್ಗೆ ಅರಿವು ಮೂಡಿಸುವ ಕಾಲ ಬಂದಿದೆ ಎಂದು ಅವರು ತಿಳಿಸಿದರು.
ಫೆ. 11ರಂದು ಬೆಳಗ್ಗೆ 9ಕ್ಕೆ ಕೊಪ್ಪಳ ಜಿಲ್ಲಾಡಳಿತದ ಸಭಾಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಮಾನಸಿಕ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಎನ್.ಕುಮಾರ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀಕಾಂತ ಬಬಲಾದಿ ಅಧ್ಯಕ್ಷತೆ ವಹಿಸುವರು. ಸಂಘಟನಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಡಾ. ಬಿ.ಎನ್. ಲೋಕೇಶ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments