ಜಗದೀಶ ಶೆಟ್ಟರ್‌ರನ್ನು ಎಂದಿಗೂ ಮರೆಯಲಾರೆ: ಹಾಲಪ್ಪ ಆಚಾರ್
ಯಲಬುರ್ಗಾ: ಕೊಪ್ಪಳ ಜಿಲ್ಲೆಯ ಕುಕನೂರ, ಕನಕಗಿರಿ ಹಾಗೂ ಕಾರಟಗಿ - ಈ ಮೂರು ಹೊಸ ತಾಲೂಕುಗಳನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಜಿಲ್ಲೆಗೆ ನಿರೀಕ್ಷೆಗೂ ಮೀರಿ ದೊಡ್ಡ ಕೊಡುಗೆ ನೀಡಿದೆ. ಶೆಟ್ಟರ್ ಅವರನ್ನು ನಾನು ಎಂದೂ ಮರೆಯಲಾರೆ ಎಂದು ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ ಹೇಳಿದ್ದಾರೆ.
ಶನಿವಾರ ಕನ್ನಡಪ್ರಭದ ಜತೆ ದೂರವಾಣಿಯಲ್ಲಿ ಮಾತನಾಡಿದ ಆಚಾರ, ಕುಕನೂರು, ಕಾರಟಗಿ ಮತ್ತಿತರ ತಾಲೂಕುಗಳ ರಚನೆ ಮಾಡಬೇಕೆಂಬ ಕನಸು ಬಹಳ ವರ್ಷಗಳಿಂದ ಇತ್ತು. ಬಿಜೆಪಿ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಮೂರು ತಾಲೂಕು ಘೋಷಿಸಿ, ಜನಪರ ಕಾಳಜಿ ಮೆರೆದಿದೆ ಎಂದು ಶ್ಲಾಘಿಸಿದರು.
ಈ ಹಿಂದೆ ಕೊಪ್ಪಳ ಜಿಲ್ಲೆ ರಚನೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರೂ ಎಂದೂ ಮರೆಯದ ಮಹಾನುಭಾವರಾಗಿದ್ದಾರೆ. ಈಗ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ಗೂ ಆ ಕೀರ್ತಿ ಸಲ್ಲುತ್ತದೆ.
ಶೆಟ್ಟರ್ ಮಂಡಿಸಿದ ಬಜೆಟ್ ರಾಜ್ಯದ ಜನತೆಯ ಮೆಚ್ಚುಗೆ ಗಳಿಸಿದೆ. ಎಲ್ಲ ವರ್ಗದ ಜನರಿಗೂ ಯೋಜನೆಗಳು ತಲುಪುವಂತೆ ಜನಪರ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಸಾಮಾನ್ಯರ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧ ಎಂದು ಸಾಬೀತುಪಡಿಸಿದ್ದಾರೆ ಎಂದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.