ವೈದ್ಯರ ಮುಷ್ಕರ: ಬಡರೋಗಿಗಳಿಗೆ ತೊಂದರೆ
ಕನ್ನಡಪ್ರಭ ವಾರ್ತೆ, ಕೊಪ್ಪಳ, ಫೆ. 10
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯರು ಮುಷ್ಕರ ನಡೆಸುತ್ತಿರುವುದರಿಂದ ರೋಗಿಗಳ ಪಾಡು ಹೇಳತೀರದಾಗಿದೆ. ಅದರಲ್ಲೂ ಬಡರೋಗಿಗಳು ಅತ್ತ ಖಾಸಗಿ ಆಸ್ಪತ್ರೆಗೂ ಹೋಗಲಾಗದೆ ಇತ್ತ ವೈದ್ಯರೂ ಇಲ್ಲದೆ ತೊಳಲಾಡುತ್ತಿದ್ದಾರೆ. ಈ ನಡುವೆ ಸರ್ಕಾರಿ ಆಸ್ಪತ್ರೆಯಲ್ಲಿ ಆಯುಷ್ ವೈದ್ಯರೇ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.
ಜಿಲ್ಲಾದ್ಯಂತ ಶೇ. 50ರಷ್ಟು ವೈದ್ಯರ ಕೊರತೆ ಇರುವ ಸಮಯದಲ್ಲಿ ಈಗ ಏಕಾಏಕಿ ವೈದ್ಯರೆಲ್ಲರೂ ಮುಷ್ಕರ ನಡೆಸಿದ್ದರಿಂದ ತೀವ್ರ ಸಮಸ್ಯೆಯಾಗಿದೆ. ತುರ್ತು ಸಂದರ್ಭಗಳಲ್ಲಿ ಮುಷ್ಕರ ನಿರತ ವೈದ್ಯರು ಮಾನವೀಯತೆ ಆಧಾರದ ಮೇರೆ ಚಿಕಿತ್ಸೆ ನೀಡುತ್ತಿರುವುದರಿಂದ ಸಮಸ್ಯೆ ಅಷ್ಟಾಗಿ ಬಿಗಡಾಯಿಸಿಲ್ಲ. ಇನ್ನು ಖಾಸಗಿಯಾಗಿಯೂ ವೈದ್ಯರ ಸೇವೆ ಇರುವುದರಿಂದ ಅಂಥ ಗಂಭೀರ ಪರಿಣಾಮ ಬೀರಿಲ್ಲ. ಸರ್ಕಾರಿ ಆಸ್ಪತ್ರೆಯನ್ನೇ ನೆಚ್ಚಿಕೊಂಡಿರುವ ಕುಟುಂಬಗಳು ಪಡಿಪಾಟಲು ಅನುಭವಿಸುವಂತೆ ಆಗಿದೆ.
ಗಂಭೀರ ಪ್ರಕರಣಗಳಿಗೆ ತುರ್ತು ಚಿಕಿತ್ಸೆಗೆ ಏರ್ಪಾಟು ಮಾಡಲಾಗಿದೆ. ಆಯುಷ್ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹಾದೇವ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.