ಉತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ: ರಾಯಚೂರಿನ ಸೈನ್ಸ್ ಎಜುಕೇಶನ್ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಉತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ ನೀಡಲು ಉದ್ದೇಶಿಸಿದ್ದು, ಅರ್ಹ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಗುಲಬರ್ಗಾ ವಿಭಾಗದ ಪ್ರತಿ ಜಿಲ್ಲೆಗೆ ಒಬ್ಬರಂತೆ 6 ಜಿಲ್ಲೆಗಳ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿಜ್ಞಾನ ಶಿಕ್ಷಕರನ್ನು ಫೆ. 28ರಂದು ಮಧ್ಯಾಹ್ನ 3ಕ್ಕೆ ವಿಜ್ಞಾನ ಬೆಟ್ಟದಲ್ಲಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ರಾಯಚೂರಿನ ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಸನ್ಮಾನಿಸಲಾಗುವುದು. ವಿಜ್ಞಾನ ಶಿಕ್ಷಕರು, ಉಪನ್ಯಾಸಕರು ತಮ್ಮ ಹೆಸರು, ವಿದ್ಯಾಭ್ಯಾಸ, ಎರಡು ಪಾಸ್ಪೋರ್ಟ್ ಸೈಜ್ ಭಾವಚಿತ್ರ, ಮೊಬೈಲ್ ಸಂಖ್ಯೆ, ವಿಜ್ಞಾನಕ್ಕೆ ಸಂಬಂಧಿಸಿದ ಲೇಖನಗಳು, ಪ್ರಕಟಿಸಿದ ಪುಸ್ತಕಗಳು, ಪ್ರಮಾಣ ಪತ್ರಗಳು, ಸುದ್ದಿ ತುಣುಕುಗಳು, ಕಾರ್ಯಕ್ರಮದ ಫೋಟೋಗಳು ಇತ್ಯಾದಿ ವಿವರಗಳನ್ನು ತಮ್ಮ ಶಾಲೆ-ಕಾಲೇಜುಗಳ ಮುಖ್ಯಸ್ಥರಿಂದ ಧೃಢೀಕರಿಸಿ ಫೆ. 15ರೊಳಗೆ ಪ್ರೊ. ಸಿ.ಡಿ. ಪಾಟೀಲ್, ಕಾರ್ಯದರ್ಶಿ, ಸೈನ್ಸ್ ಎಜುಕೇಶನ್ ಟ್ರಸ್ಟ್, ರಾಷ್ಟ್ರಕವಿ ಕುವೆಂಪು ವನ, ವಿಜ್ಞಾನ ಬೆಟ್ಟ, ರಾಯಚೂರು 584103 ಮೊ. 9448427585ಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.