ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೊಪ್ಪಳ

ಯುವಕರು ದುಶ್ಚಟಕ್ಕೆ ಬಲಿಯಾಗದಿರಿ

Parashurama
Updated On : 12 Feb 2013, 11:58 am

ಕೊಪ್ಪಳ: ಯುವಕರು ದುಶ್ಚಟಗಳಿಗೆ ಮಾರುಹೋಗದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಬಾಲ್ಯದಿಂದ ಕ್ರೀಡೆಯಲ್ಲಿ ಭಾಗವಹಿಸುವದರಿಂದ ಉತ್ತಮ ಕ್ರೀಡಾಪಟುಗಳಾಗಿ ಹೊರಬರಲು ಸಾಧ್ಯವಾಗುತ್ತದೆ ಎಂದು ಸೈಯದ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಎಂ. ಸೈಯದ್ ಹೇಳಿದರು.
ತಾಲೂಕಿನ ಕಾತರಕಿ ಗುಡ್ಲಾನೂರು ಗ್ರಾಮದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ತ ಸುಭಾಶ್ಚಂದ್ರ ಭೋಸ್ ವಿಕಲಚೇತನರ ಕಲಾ ಕ್ಷೇಮಾಭಿವೃದ್ಧಿ ಸಂಘದಿಂದ ಏರ್ಪಡಿಸಿದ್ದ ಅಂಗವಿಕಲರ ಕ್ರೀಡಾಕೂಟದ ಜ್ಯೋತಿ ಬೆಳಗಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಕ್ರೀಡಾಪಟುಗಳಿದ್ದು, ಅಂತಹ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಮಾರ್ಗದರ್ಶನ, ಸೂಕ್ತ ತರಬೇತಿ ಅವಶ್ಯವಿದೆ ಎಂದರು.
ಗ್ರಾಮದಲ್ಲಿ ನೀರಿನ ಆವಶ್ಯಕತೆ ಇದ್ದರೆ ನಮ್ಮ ಸಂಸ್ಥೆಯಿಂದ ಕುಡಿಯುವ ನೀರಿಗಾಗಿ ಉಚಿತ ಬೋರ್‌ವೆಲ್ ಹಾಕಿಸಿ ಕೊಡಲಾಗುವುದು ಎಂದು ಹೇಳಿದರು. ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ ಅಂಗಡಿ ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಗ್ರಾಮದ ಹಿರಿಯರಾದ ದೊಡ್ಡನಗೌಡ ಪೊಲೀಸ್ ಪಾಟೀಲ ಅಧ್ಯಕ್ಷತೆ ವಹಿಸಿ, ಸುಭಾಶ್ಚಂದ್ರ ಭೋಸ್ ವಿಕಲಚೆತನರ ಕ್ಷೇಮಾಭಿವೃದ್ಧಿ ಸಂಘದ ನಾಮಪಲಕ ಉದ್ಘಾಟಿಸಿದರು. ರಘು ಪಟ್ಟಣಶೆಟ್ಟಿ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶಿದ್ದಪ್ಪ ಹೂರಿಜೋಳ, ಮೈಲಪ್ಪ ದೇವರಮನಿ, ರಾಜು ಹುರಕಡ್ಲಿ, ಜಗದಯ್ಯ ಸಾಲಿಮಠ, ಶಿದ್ದನಗೌಡ ಹಿರೇಗೌಡರ, ಮಲ್ಲಿಕಾರ್ಜುನ ವೈ. ಪೂಜಾರ, ಮಂಜುನಾಥ ಹೊಸಕೇರೆ, ತಿಮ್ಮಣ್ಣ ವಡ್ಡರ್, ಹುಲಗಪ್ಪ ಕಾಗಿ, ಪ್ರತಾಪ ನವಲಿ, ಶಂಕ್ರಯ್ಯ ಕೊಳೂರು, ಸಿದ್ದಲಿಂಗಯ್ಯ ಗೋರ್ಲೆಕೊಪ್ಪ, ಅಳವಂಡಿ, ಗಂಗಮ್ಮ, ಭರಮಪ್ಪ ಇದ್ದರು.
ವಿರೇಶ ಆಲಗುಂಡಿ ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದ್ ಹನೀಫ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments