ವಸತಿ ಶಾಲೆ ಪ್ರವೇಶ: ಅರ್ಜಿ ಆಹ್ವಾನ
ಕೊಪ್ಪಳ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2013-14ನೇ ಸಾಲಿನಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸಕ್ತ 5ನೇ ತರಗತಿಯಲ್ಲಿ ಓದುತ್ತಿರುವ ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 2ಎ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವೇಶ ಪರೀಕ್ಷೆಗೆ ಆಯಾ ತಾಲೂಕು ಬಿಸಿಎಂ ವಿಸ್ತರಣಾಧಿಕಾರಿ ಅಥವಾ ಆಯಾ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಿಂದ ಪ್ರವೇಶ ಪತ್ರಗಳನ್ನು ಪಡೆದು ಫೆ. 25ರ ಒಳಗೆ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು ಮಾರ್ಚ್ 24ರಂದು ಬೆಳಗ್ಗೆ 11ಕ್ಕೆ ನಡೆಯಲಿದ್ದು, ಪ್ರವೇಶ ಅರ್ಜಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಅಂಗವಿಕಲ ವಿದ್ಯಾರ್ಥಿಗಳು ವೈದ್ಯಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರದ ನಕಲು ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕು.
ಜಿಲ್ಲೆಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಒಟ್ಟು 20 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಹಾಗೂ 1 ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ. 50ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಮತ್ತು ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಶೇ. 100ರಷ್ಟು ವಿದ್ಯಾರ್ಥಿನಿಯರಿಗೆ ಹಾಗೂ ಅಟಲ್ ಬಿಹಾರಿ ವಾಜಪೇಯಿ ಶಾಲೆಗೆ ತಲಾ 40 ಸೀಟುಗಳು ಬಾಲಕರಿಗೆ ಮತ್ತು ಬಾಲಕಿಯರಿಗೆ ಲಭ್ಯವಿರುತ್ತವೆ.
ಮಾಹಿತಿಗೆ ಪ್ರಾಚಾರ್ಯರು, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಕೊಪ್ಪಳ - 9480885004, ಕುಷ್ಟಗಿ ತಾಲೂಕು-94808 85012, ಯಲಬುರ್ಗಾ- 94808 85000, ಗಂಗಾವತಿ- 94808 84986 ಸಂಪರ್ಕಿಸಬಹುದು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.