ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೊಪ್ಪಳ

ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Parashurama
Updated On : 14 Feb 2013, 12:33 pm

ಕಾರಟಗಿ: ಪಟ್ಟಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಸ್ಥಳೀಯ ಗಂಗಾಮತ ಸಮಾಜ ಸೋಮವಾರ ವಿಜೃಂಭಣೆಯಿಂದ ಆಚರಿಸಿತು.
ಪಟ್ಟಣದ ಹೊರವಲಯ ನಾಲೆಯಿಂದ ಕನಕಬಸವ ಕಲ್ಯಾಣ ಮಂಟಪ ವರೆಗೆ ಅಂಬಿಗರ ಚೌಡಯ್ಯ ಭಾವಚಿತ್ರದ ಮೆರವಣಿಗೆ ನಡೆಸಿದರು.
ಮೆರವಣಿಗೆಯಲ್ಲಿ 111 ಕುಂಭ-ಕಳಸ ಹೊತ್ತ ಮಹಿಳೆಯರು ಪಾಲ್ಗೊಂಡಿದ್ದರು. ಹರಿಗೋಲಿನಲ್ಲಿ ಅಂಬಿಗರ ಚೌಡಯ್ಯ ವೇಷದಾರಿ ಗಮನ ಸೆಳೆದರು. ಮೆರವಣಿಗೆ ಕನಕದಾಸ ವೃತ್ತ, ಹಳೆ ಬಸ್ ನಿಲ್ದಾಣ, ಶರಣಬಸವೇಶ್ವರ ದೇವಸ್ಥಾನದ ಮೂಲಕ ವೇದಿಕೆ ತಲುಪಿತು. ಬಾಜಾ ಬಜಂತ್ರಿ, ತಾಶ, ಯುವಕರ ಹೆಜ್ಜೆ ಕುಣಿತ ಆಕರ್ಷಕವಾಗಿತ್ತು. ಎಚ್.ಆರ್. ಶ್ರೀನಾಥ ಕಾರ್ಯಕ್ರಮ ಉದ್ಘಾಟಿಸಿದರು. ರಾಜಶೇಖರ್ ಮುಷ್ಟೂರು, ವೀರೇಶ ಸಾಲೋಣಿ, ಬಿ.ಜಿ. ಅರಳಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments