ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೊಪ್ಪಳ

ಭತ್ಯೆ ತಾರತಮ್ಯ: ಧರಣಿ

Parashurama
Updated On : 14 Feb 2013, 12:32 pm

ಕೊಪ್ಪಳ: ರಾಜ್ಯದ ಶಿಕ್ಷಕರ ವೇತನದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಂಡಿಸಿದ 2013-14ರ ಬಜೆಡ್‌ನಲ್ಲಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರಿಗೆ ಬಾಡಿಗೆ ಭತ್ಯೆ ಹೆಚ್ಚಿಸಿ, ಇತರ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಅನ್ಯಾಯ ಎಸಗಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಿಕ್ಷಕ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ನಡೆಸಿದವು.
ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜು ಶಿಕ್ಷಕರು ಬುಧವಾರ ಈ ಧರಣಿ ಹಮ್ಮಿಕೊಂಡಿದ್ದರು. ಬೇರೆ ರಾಜ್ಯಗಳಿಗೆ ಹೋಲಿಸಿದಾಗ ರಾಜ್ಯದ ಶಿಕ್ಷಕರು ಅತ್ಯಂತ ಕಡಿಮೆ ವೇತನ ಪಡೆಯುತ್ತಿದ್ದಾರೆ. ಶಿಕ್ಷಕ ಮತ್ತು ಉಪನ್ಯಾಸಕರಿಗೆ ನೀಡುವ ವಿಶೇಷ ವೇತನವನ್ನು ಮೂಲ ವೇತನದಲ್ಲಿ ವಿಲೀನಗೊಳಿಸುವ ಪ್ರಸ್ತಾಪವನ್ನೂ ಬಜೆಟ್‌ನಲ್ಲಿ ಮಾಡಿಲ್ಲ. ಇದರಿಂದ ತಮಗೆ ಅನ್ಯಾಯವಾಗಿದೆ ಎಂದು ಶಿಕ್ಷಕರು ದೂರಿದರು.
ಕೇಂದ್ರ ಸರ್ಕಾರದ ಮಾದರಿಯಲ್ಲಿ ಮನೆ ಬಾಡಿಗೆ ಮತ್ತು ನಗರ ಭತ್ಯೆ ಹೆಚ್ಚಿಸುವಂತೆ ಕಳೆದ ಬಾರಿಯೇ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೂ ಶಿಕ್ಷಕರಿಗೆ ನೀಡುವ ಇತರ ಬಾಡಿಗೆ ಭತ್ಯೆಯಲ್ಲಿ ವ್ಯತ್ಯಾಸ ಮಾಡಲಾಗಿದೆ. ಈ ಸಂಬಂಧ ಚರ್ಚಿಸಿ, ತಾರತಮ್ಯ ನಿವಾರಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರ ತನ್ನ ಅಧೀನ ನೌಕರರಿಗೆ ಸಮಾನ ವೇತನ ನೀಡುತ್ತಿದೆ. ರಾಜ್ಯ ಸರ್ಕಾರವೂ ಶಿಕ್ಷಕರ ವೇತನದಲ್ಲಿ ತಾರತಮ್ಯ ಮಾಡದೆ ಸಮಾನ ವೇತನ ನೀಡಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಜಿಲ್ಲಾಡಳಿತ ಭವನದ ಮುಂದೆ ಬುಧವಾರ ಒಂದು ದಿನದ ಸಾಂಕೇತಿಕ ಧರಣಿ ನಡೆಸಿದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು ಹಾಗೂ ಪದವಿಪೂರ್ವ ಉಪನ್ಯಾಸಕರ ಸಂಘಗಳು ಪದಾಧಿಕಾರಿಗಳು ಸರ್ಕಾರದ ವೇತನ ಭತ್ಯೆ ತಾರತಮ್ಯಕ್ಕೆ ಆಕ್ಷೇಪಿಸಿದರು.
ಧರಣಿಯ ನೇತೃತ್ವವನ್ನು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭು ಕಿಡದಾಳ, ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಝಾಕೀರ್ ಹುಸೇನ್ ಕುಕನೂರ, ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ರಾಜಶೇಖರ ಪಾಟೀಲ್ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments