ಭಾಗ್ಯನಗರ: ಜ್ಞಾನ-ವಿಜ್ಞಾನ ಪ್ರದರ್ಶನ
ಕೊಪ್ಪಳ: ಸಮೀಪದ ಭಾಗ್ಯನಗರದ ಜ್ಞಾನಬಂಧು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಮಕ್ಕಳ ಜ್ಞಾನ ವಿಜ್ಞಾನ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲೆ ಮಕ್ಕಳು ಪಾಲ್ಗೊಂಡು ಪ್ರದರ್ಶನಕ್ಕಿಟ್ಟ ವಿಜ್ಞಾನ ಪರಿಕರಗಳನ್ನು ವೀಕ್ಷಿಸಿದರು. ಸಮಾಜ, ಗಣಿತ, ವಿಜ್ಞಾನ, ಕನ್ನಡ ಮತ್ತು ಇಂಗ್ಲಿಷ್ ವಿಷಯವಾರು ಹಲವಾರು ಮಾದರಿ ಮತ್ತು ಚಾರ್ಟ್ಗಳನ್ನು ಪ್ರದರ್ಶನಕ್ಕಿಡಲಾಗಿತ್ತು.
ಅನಂತರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶಾಲೆಯ 4ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಸ್ವಾಮಿ ಭಾಗವಹಿಸಿದ್ದರು.
ಭಾಗ್ಯನಗರದ ವಾಣಿಜ್ಯೋದ್ಯಮಿ ಶ್ರೀನಿವಾಸ ಗುಪ್ತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ರಾಘವೇಂದ್ರ ಪಾನಘಂಟಿ, ಶ್ರೀನಿವಾಸ ಹ್ಯಾಟಿ, ಹೊನ್ನೂರಸಾಬ ಭೈರಾಪುರ, ಎಚ್.ಎಸ್. ಪಾಟೀಲ್, ಮೊಹಮ್ಮದ್ ಅಲೀಮುದ್ದೀನ್ ಹಾಗೂ ಸತೀಶ್ ಮೇಘರಾಜ ಉಪಸ್ಥಿತರಿದ್ದರು.
ಸಂಸ್ಥೆಯ ಅಧ್ಯಕ್ಷ ದಾನಪ್ಪ ಜಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಚಾಮುಂಡಿ ಮೇಟಿ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಎಸ್.ಎಸ್. ಸ್ವಾಗತಿಸಿದರು. ಮಂಜುಳಾ ಎ. ಕಳ್ಳಿಮನಿ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.