ಶಿವಾಜಿ ಜಯಂತಿ: ಇಂದು ಕೊಪ್ಪಳದಲ್ಲಿ ಸಭೆ
ಕೊಪ್ಪಳ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಫೆ. 14ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಫೆ. 19ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದ್ದು, ಪೂರ್ವಭಾವಿ ಸಭೆ ಫೆ. 14ರಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮ್ಮೇಳನ: ಇಂದು ಪೂರ್ವಭಾವಿ ಸಭೆ
ಯಲಬುರ್ಗಾ: ತಾಲೂಕಿನ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಫೆ. 14ರ ಬೆಳಗ್ಗೆ 10.30ಕ್ಕೆ ಪಟ್ಟಣದ ಹೊಸ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಾಹಿತಿಗಳು, ಕಲಾವಿದರು, ಅಜೀವ ಸದಸ್ಯರು, ಸಾಹಿತ್ಯಾಭಿಮಾನಿಗಳು, ಕಸಾಪ ಪದಾಧಿಕಾರಿಗಳು, ವಿವಿಧ ಘಟಕದ ಅಧ್ಯಕ್ಷರು, ವಿವಿಧ ಸಂಘಟನೆ ಮುಖಂಡರು, ಗಣ್ಯರು ಪಾಲ್ಗೊಂಡು ಸಲಹೆ-ಸೂಚನೆಗಳನ್ನು ನೀಡಬೇಕೆಂದು ಕಸಪಾ ತಾಲೂಕಾಧ್ಯಕ್ಷ ಶಿವಮೂರ್ತಿ ಇಟಗಿ, ಕಾರ್ಯದರ್ಶಿ ಶರಣಪ್ಪ ಪಾಟೀಲ ತಿಳಿಸಿದ್ದಾರೆ.
ಕರವೇ ಸ್ವಾಭಿಮಾನಿಪದಾಧಿಕಾರಿಗಳ ಆಯ್ಕೆ
ಯಲಬುರ್ಗಾ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಜಿಲ್ಲಾಧ್ಯಕ್ಷ ರಾಜೇಶ ಅಂಗಡಿ ನೇತೃತ್ವದಲ್ಲಿ ಭಾನುವಾರ ಸಂಜೆ ನಡೆದ ಸಭೆಯಲ್ಲಿ ವೇದಿಕೆಯ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಮುತ್ತುರಾಜ ಚಲವಾದಿ (ಅಧ್ಯಕ್ಷ), ಸಿದ್ದು ರಾಜೂರ, ದ್ಯಾಮಣ್ಣ ಹಳ್ಳಿಕೇರಿ (ಉಪಾಧ್ಯಕ್ಷ), ಶಶಿಧರ ಚಲವಾದಿ (ಪ್ರ.ಕಾರ್ಯದರ್ಶಿ), ಲಕ್ಷ್ಮಣ ಚಲವಾದಿ (ಸಹ ಕಾರ್ಯದರ್ಶಿ), ಮಾರುತಿ ಚಿಣಗಿ, ರವಿ ಸಿದ್ನೆಕೊಪ್ಪ (ಸಂ.ಕಾರ್ಯದರ್ಶಿ), ಮಲ್ಲಪ್ಪ ಸುರಕೋಡ ಕಾರ್ಮಿಕ ಘಟದ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದರು.
ಅಂಗನವಾಡಿ ಮಕ್ಕಳಿಗೆ ಹಾಲಿನ ಪುಡಿ ವಿತರಣೆ
ಕೊಪ್ಪಳ: ತಾಲೂಕಿನ ಮುದ್ದಾಬಳ್ಳಿ ಗ್ರಾಮದಲ್ಲಿ ಬುಧವಾರ ಮೂರು ವರ್ಷದ ಒಳಗಿನ ಮಕ್ಕಳಿಗೆ ಹಾಲಿನ ಪುಡಿ ವಿತರಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಗೋವಿಂದರಡ್ಡಿ ಮಾದಿನೂರು ಉದ್ಘಾಟಿಸಿದರು. ಸಣ್ಣ ಹನುಮಪ್ಪ ಹುಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಹತ್ತಿಕಟಗಿ, ಪಂಪಣ್ಣ ಹಳ್ಳಿಗುಡಿ, ವಾಸಪ್ಪ ಮುದ್ದಿ, ಶಿಕ್ಷಕರು, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು. ಗ್ರಾಮದ ಚಿಕ್ಕ ಮಕ್ಕಳಿಗೂ ಹಾಲಿನ ಪುಡಿ ವಿತರಿಸಲಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.