ಕೊಪ್ಪಳ

ಲೋಕಾಯುಕ್ತರಿಂದ ದೂರು ಆಹ್ವಾನ

ಕೊಪ್ಪಳ: ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರು ಜ. 30ರಂದು ಗಂಗಾವತಿ ಮತ್ತು ಕೊಪ್ಪಳ ಹಾಗೂ ಜ. 31ರಂದು ಯಲಬುರ್ಗಾ ಮತ್ತು ಕುಷ್ಟಗಿ ಪ್ರವಾಸ ಕೈಗೊಂಡು, ಸಾರ್ವಜನಿಕರಿಂದ ಕುಂದುಕೊರತೆಗಳ ದೂರುಗಳನ್ನು ಸ್ವೀಕರಿಸಿ ಅಹವಾಲು ಆಲಿಸುವರು.
ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರು ಜ. 30ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಗಂಗಾವತಿ ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2.30 ರಿಂದ ಸಂಜೆ 5. 30ರ ವರೆಗೆ ಕೊಪ್ಪಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸುವರು.
ಜ. 31ರಂದು ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಕುಷ್ಟಗಿಯ ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2. 30 ರಿಂದ ಸಂಜೆ 5. 30ರ ವರೆಗೆ ಯಲಬುರ್ಗಾ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸುವರು.
ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿ ನೀಡಿ ಸದುಪಯೋಗ ಪಡೆಯಲು ಕೋರಲಾಗಿದೆ. ಅಲ್ಲದೆ, ದೂರು ಸಲ್ಲಿಸಲು ಬೇಕಾಗುವ ಪ್ರಪತ್ರ ಸಂಖ್ಯೆ 1  ಮತ್ತು 2ರ ನಮೂನೆಯನ್ನು ಸ್ಥಳದಲ್ಲಿಯೇ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ  ಆರಕ್ಷಕ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಕೊಪ್ಪಳ, ದೂ. 08539-220533 ಅಥವಾ 08539-220200ಕ್ಕೆ ಸಂಪರ್ಕಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ