ಕೊಪ್ಪಳ

ಸಚಿವ ಗೋವಿಂದಕಾರಜೋಳ ಪ್ರವಾಸ


ಕೊಪ್ಪಳ: ರಾಜ್ಯ ಸಣ್ಣ ನೀರಾವರಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಎಂ. ಕಾರಜೋಳ ಅವರು ಫೆ. 2ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಸಂಜೆ 5ಕ್ಕೆ ಗಂಟೆಗೆ ಗಂಗಾವತಿ ತಾಲೂಕು ಕನಕಗಿರಿಗೆ ಆಗಮಿಸುವರು. ಕನಕಗಿರಿಯಲ್ಲಿ ಏರ್ಪಡಿಸಲಾಗಿರುವ ಕನಕಗಿರಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಚಿವರು ಅದೇ ದಿನ ರಾತ್ರಿ 8.30ಕ್ಕೆ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸುವರು.
ನಾಳೆ ತ್ರಿವಿಕ್ರಮ ಜೋಷಿ ಪ್ರವಾಸ ಕಾರ್ಯಕ್ರಮ
ಕೊಪ್ಪಳ: ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ತ್ರಿವಿಕ್ರಮ ಜೋಷಿ ಫೆ. 1ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತ್ರಿವಿಕ್ರಮ ಜೋಷಿಯವರು ಅಂದು ಮಧ್ಯಾಹ್ನ 3ಕ್ಕೆ ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸುವರು.
ಹುತಾತ್ಮ ದಿನಾಚರಣೆ
ಗಂಗಾವತಿ: ಹುತಾತ್ಮರ ದಿನಾಚರಣೆ ಅಂಗವಾಗಿ ನಗರದ ವಿಶ್ವಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಂದ ಶೃದ್ಧಾಂಜಲಿ ಕಾರ್ಯಕ್ರಮ ಜರುಗಿತು. ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ವಿದ್ಯಾರ್ಥಿಗಳು ನೃತ್ಯ ರೂಪಕದೊಂದಿಗೆ ಕೈಯಲ್ಲಿ ದೀಪಗಳನ್ನು ಹಿಡಿದು ಶೃದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರವಣಕುಮಾರ ರಾಯ್ಕರ್ ಮಾತನಾಡಿ, ಸೈನಿಕರು, ಹೋರಾಟಗಾರರು ಬಲಿದಾನದ ಸ್ಮರಣೆಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಸಂಸ್ಥೆಯ ಸದಸ್ಯರಾದ ನ್ಯಾಯವಾದಿ ಎನ್. ಪ್ರಹ್ಲಾದರಾವ್, ಮುಖ್ಯೋಪಾಧ್ಯಾಯ ವೆಂಕಟೇಶರಾವ್, ವಾದಿರಾಜ ಸಿಂಗನಾಳ ಇದ್ದರು.
ಬೆಟದಪ್ಪ ನೇಮಕ
ಗಂಗಾವತಿ: ಕಾಂಗ್ರೆಸ್‌ನ ಇತರೆ ಹಿಂದುಳಿದ ವರ್ಗಗಳ(ಓಬಿಸಿ)ಗಂಗಾವತಿ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಬೆಟದಪ್ಪ ಈಳಿಗೇರ ಅವರನ್ನು ನೇಮ ಮಾಡಲಾಗಿದೆ. ಕೆಪಿಸಿಸಿ ಇತರೆ ಹಿಂದುಳಿದ ವರ್ಗಗಳ ವಿಭಾಗದ ಆದೇಶದ ಮೇರೆಗೆ ಬೆಟದಪ್ಪ ಈಳಿಗೇರ ಅವರನ್ನು ಇತರೆ ಹಿಂದುಳಿದ ವರ್ಗಗಳ(ಓಬಿಸಿ)ಗ್ರಾಮೀಣ ಸಮಿತಿ ಅಧ್ಯಕ್ಷ ಈ. ಹನುಮಂತರಾಯ ನೇಮಕ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಸುಮಾರು ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದು, ಪಕ್ಷದ ಸಂಘಟನೆಗೆ ಶ್ರಮಿಸಬೇಕೆಂದು ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ