ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೊಪ್ಪಳ

12ರಿಂದ ಟಿಪ್ಪು ಸುಲ್ತಾನ್ ರಥ ಸಂಚಲನ

Parashurama
Updated On : 10 Mar 2013, 12:32 pm

ಕೊಪ್ಪಳ:  ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ಮಾ. 12ರಿಂದ 16ರ ವರೆಗೆ ಜಿಲ್ಲಾದ್ಯಂತ ನವಾಬ್-ಎ-ಟಿಪ್ಪು ಸುಲ್ತಾನ್ ಬಹಾದ್ದೂರ್ ರಥ ಸಂಚಲನ ಹಮ್ಮಿಕೊಳ್ಳಲಾಗಿದೆ ಎಂದು ಟಿಪ್ಪು ಸುಲ್ತಾನ್ ಅಭಿಮಾನಿ ಬಳಗ ಹಾಗೂ ಗ್ರಾಮದ ಹಿರಿಯರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಟಿಪ್ಪು ಸುಲ್ತಾನ್ ಕನ್ನಡಾಂಬೆ ಹೆಮ್ಮೆಯ ಪುತ್ರ. ಬ್ರಿಟಿಷರಲ್ಲಿ ತನ್ನ ಮಕ್ಕಳನ್ನೇ ಒತ್ತೆಯಿಟ್ಟ ಮಹಾನ್ ಧೀರ. ಟಿಪ್ಪು ಅವರ ಜನ್ಮ ದಿನದಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲು ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೆ, ಸರ್ಕಾರ ಹಿಂದೇಟು ಹಾಕುತ್ತಿದೆ. ಹೀಗಾಗಿ, ಮಾ. 12ರಿಂದ 16ರ ವರಗೆ ತಳಕಲ್ ಗ್ರಾಮದ ಟಿಪ್ಪು ಅಭಿಮಾನಿ ಬಳಗದಿಂದ ರಥ ಸಂಚಲನ ಪ್ರಾರಂಭ ಮಾಡಿ ಕುಕನೂರು, ಯಲಬುರ್ಗಾ, ಕುಷ್ಟಗಿ, ತಾವರಗೇರಾ, ಕನಕಗಿರಿ, ಕಾರಟಗಿ, ಗಂಗಾವತಿ ಮುಖಾಂತರ ಮಾ. 16ರಂದು ಕೊಪ್ಪಳಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆಯಲ್ಲಿ ತೆರಳಿ ಮನವಿ ನೀಡಲಾಗುವುದು ಎಂದು ವಕೀಲ ಎಸ್. ಆಸೀಫ್ ಅಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments