ಮಹಿಳೆಯರ ಬಗ್ಗೆ ಗೌರವ ಹೊಂದಿ
ಕೊಪ್ಪಳ: ನಗರದ ಗವಿಸಿದ್ದೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಇತ್ತೀಚಿಗೆ ಅಂತರ್ ರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು. ಉಪನ್ಯಾಸಕ ಎಸ್.ಎಸ್. ಸೊಪ್ಪಿಮಠ ಮಾತನಾಡಿ, ಮಹಿಳೆಯರ ಬಗ್ಗೆ ಅಪಾರ ಗೌರವ ಹೊಂದಬೇಕು ಎಂದರು. ಉಪನ್ಯಾಸಕ ಎಲ್.ಎಸ್. ಹೊಸಮನಿ ಮಾತನಾಡಿದರು. ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಬಿ. ಗಾಂಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳ ಪರ ರಾಜೇಶ್ವರಿ, ನಾಗವೇಣಿ, ನಾಗರತ್ನ ಮಾತನಾಡಿದರು. ಅನಿತಾ ಕಿನ್ನಾಳ ಕಾರ್ಯಕ್ರಮ ನಿರೂಪಿಸಿದರು. ಶಶಿಕಲಾ ಹಳ್ಳಿಕೇರಿ ಸ್ವಾಗತಿಸಿದರು. ಕಾಲೇಜು ಪ್ರಭಾರಿ ಪ್ರಾಚಾರ್ಯ ಶಾಂತೇಶ ಅಂಗಡಿ ಮಾತನಾಡಿದರು. ಉಪನ್ಯಾಸಕರಾದ ವಿ.ಆರ್. ಪಾಟೀಲ್, ದೇವರಾಜ ಬಡಿಗೇರ ಉಪಸ್ಥಿತರಿದ್ದರು. ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಇದ್ದರು.
12ರಂದು ಮನೆ ಫಲಾನುಭವಿಗಳ ಆಯ್ಕೆ
ಕೊಪ್ಪಳ: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಐಎಚ್ಎಸ್ಡಿಪಿ ಯೋಜನೆಯಡಿ ನಿರ್ಮಿಸಲಾಗಿರುವ 246 ಮನೆಗಳ ಹಂಚಿಕೆಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಮಾ. 10ರಂದು ನಡೆಸಲು ಉದ್ದೇಶಿಸಲಾಗಿದ್ದ ಸಭೆಯನ್ನು ಮಾ. 12ಕ್ಕೆ ಮುಂದೂಡಲಾಗಿದೆ. ಯೋಜನೆಯಲ್ಲಿ ನಿರ್ಮಿಸಲಾಗಿರುವ 249 ಮನೆಗಳ ಪೈಕಿ ಮೊದಲ ಹಂತದಲ್ಲಿ 145 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಬಾಕಿ ಉಳಿದಿರುವ 104 ಮನೆಗಳ ಹಂಚಿಕೆಗಾಗಿ ಮಾ. 10ರಂದು ಫಲಾನುಭವಿಗಳ ಆಯ್ಕೆ ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು. ಈಗ ಈ ಸಭೆಯನ್ನು ಮಾ. 12ಕ್ಕೆ ಮುಂದೂಡಲಾಗಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಅರ್ಜಿದಾರರಿಗೆ ಮಾತ್ರ ಪ್ರವೇಶವಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗದಗ ಉಪವಿಭಾಗ - ಇವರನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.