ಯಲಬುರ್ಗಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಿ.ಎಂ. ಚನ್ನಬಸಪ್ಪ
ಯಲಬುರ್ಗಾ: ಪಟ್ಟಣದ ಬುದ್ದ ಬಸವ ಅಂಬೇಡ್ಕರ್ ಭವನದಲ್ಲಿ ಮಾ. 29ರಂದು ನಡೆಯಲಿರುವ ತಾಲೂಕು ಮಟ್ಟದ 8ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತಿ ಸಿ.ಎಂ. ಚನ್ನಬಸಪ್ಪನವರನ್ನು ಆಯ್ಕೆ ಮಾಡಲಾಗಿದೆ.
ಈಚೆಗೆ ನಡೆದ ಕಾರ್ಯಕಾರಿ ಸಮಿತಿ ಪೂರ್ವಭಾವಿ ಸಭೆಯಲ್ಲಿ ಯಲಬುರ್ಗಾ ತಾಲೂಕಿನ ಮಂಜಲಗೇರಿ ಗ್ರಾಮದ ಹಿರಿಯ ಸಾಹಿತಿ ಹಾಗೂ ಪ್ರಸ್ತುತ ಮುಂಡಗೋಡ ತಾಲೂಕಿನ ಸಿಂಧೂರಿನ ಸಿಂಡಿಕೇಟ್ ಬ್ಯಾಂಕಿನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಸಿ.ಎಂ. ಚನ್ನಬಸಪ್ಪನವರನ್ನು ಆಯ್ಕೆ ಮಾಡಲಾಗಿದೆ. ಮಾ. 13ರಂದು ಹುಬ್ಬಳ್ಳಿಗೆ ತೆರಳಿ ಕಸಾಪ ತಾಲೂಕು ಘಟಕದಿಂದ ಸಮ್ಮೇಳನದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಗುತ್ತದೆ ಎಂದರು. ಈ ಸಭೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವೀರಣ್ಣ ನಿಂಗೋಜಿ, ಸಾಹಿತಿಗಳಾದ ಮುನಿಯಪ್ಪ ಹುಬ್ಬಳ್ಳಿ, ಡಾ. ಎಸ್.ಎನ್. ಶಿವರೆಡ್ಡಿ, ಜಿಲ್ಲಾ ಗೌರವ ಕೋಶಾಧ್ಯಕ್ಷ ಆರ್.ಎಸ್. ಸರಗಚಾರ, ಹೋಬಳಿ ಘಟಕದ ಅಧ್ಯಕ್ಷರಾದ ಹನಮಂತಪ್ಪ ಜಳಕಿ, ಶರಣಪ್ಪ ಹರ್ಲಾಪುರ, ರಾಜಕುಮಾರ ಸುರ್ವೆ, ಎಂ.ಪಿ.ದೊಡ್ಮನಿ, ಶರಣಪ್ಪ ತಮ್ಮಿನಾಳ ಮತ್ತಿತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.