ಕಾಂಗ್ರೆಸ್ ಗೆಲವು: ವಿಜಯೋತ್ಸವ
ಯಲಬುರ್ಗಾ: ಸ್ಥಳೀಯ ಪಟ್ಟಣ ಪಂಚಾಯ್ತಿಯ ಮತ ಎಣಿಕೆ ಮುಗಿಯುತ್ತಿದ್ದಂತೆ ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಣ್ಣದಲ್ಲಿ ಮಿಂದೆದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಸರ್ಕಲ್, ಕನ್ನಡ ಕ್ರಿಯಾ ಸಮಿತಿ ಹಾಗೂ ಕನಕದಾಸ ವೃತ್ತಗಳಲ್ಲಿ ಕಾರ್ಯಕರ್ತರು ಸಂಭ್ರಮಿಸಿದರು. ತಹಸೀಲ್ದಾರ್ ಕಚೇರಿ ಆವರಣ ಅಕ್ಷರಶಃ ಓಕಳಿ ಮೈದಾನವಾಗಿ ಮಾರ್ಪಟ್ಟಿತ್ತು.
ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿನಿಂದ ಪಕ್ಷ ಪಟ್ಟಣ ಪಂಚಾಯ್ತಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಬೆಳಗ್ಗೆಯಿಂದ ತಹಸೀಲ್ದಾರ್ ಕಚೇರಿಯಲ್ಲಿ ಮುಂಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಬಸವರಾಜ ಉಳ್ಳಾಗಡ್ಡಿ, ಜಿಪಂ ಮಾಜಿ ಉಪಾಧ್ಯಕ್ಷ ಯಂಕಣ್ಣ ಯರಾಶಿ, ಬಿ.ಎಂ. ಶಿರೂರು, ರಾಘಣ್ಣ ಗುನ್ನಾಳ, ಶರಣಪ್ಪ ಕೊಪ್ಪಳ, ಹನುಮಂತಗೌಡ ಪಾಟೀಲ, ಬಸವಲಿಂಗಪ್ಪ ಭೂತೆ, ಡಾ. ಶಿವನಗೌಡ ದಾನರೆಡ್ಡಿ, ಶರಣಪ್ಪ ಗಾಂಜಿ, ಮಲ್ಲಪ್ಪ ಹೊಸಳ್ಳಿ, ಬಸವರಾಜ ಕುಡಗುಂಟಿ, ಸುರ್ಧಿರ ಕೊರ್ಲಳ್ಳಿ, ಮಲ್ಲು ಜಕ್ಕಲಿ, ಈರಮ್ಮ ಚಲವಾದಿ ಸೇರಿದಂತೆ ಕಾಂಗ್ರೆಸ್ನ ಅಭ್ಯರ್ಥಿಗಳು ಉಪಸ್ಥಿತರಿದ್ದರು.
ಅಭಿವೃದ್ಧಿಗೆ ಸಂದ ಜಯ: ಮಾಜಿ ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಈ ಹಿಂದೆ ಶಾಸಕನಾಗಿದ್ದಾಗ ತಾಲೂಕಿನಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದರಿಂದ ಪ್ರೀತಿ-ವಿಶ್ವಾಸ, ಅಭಿಮಾನ ಹಾಗೂ ಇನ್ನೂ ಹೆಚ್ಚಿನ ಅಭಿವೃದ್ಧಿ ನಿರೀಕ್ಷೆಯಿಟ್ಟುಕೊಂಡು ಪಟ್ಟಣದ ಜನತೆ ಕಾಂಗ್ರೆಸ್ನ ಏಳು ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಉತ್ತಮ ವ್ಯಕ್ತಿಗಳನ್ನು ಗುರುತಿಸಿದ್ದಾರೆ: ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ್ ಮಾತನಾಡಿ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜನರು ಪಕ್ಷಕ್ಕೆ ಹೆಚ್ಚು ಮಹತ್ವ ನೀಡದೆ, ಅಲ್ಲಿ ಸ್ಪರ್ಧಿಸಿರುವ ವ್ಯಕ್ತಿಗಳಲ್ಲಿ ಯಾರು ಉತ್ತಮರು ಇದ್ದಾರೆಂಬುದನ್ನು ಗುರುತಿಸಿ ಅವರನ್ನು ಚುನಾಯಿಸಿದ್ದಾರೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.