ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಕುರ್ಚಿ ಕದನ
ಕನ್ನಡಪ್ರಭ ವಾರ್ತೆ, ಕೊಪ್ಪಳ, ಮಾ. 16
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಈಗ ಕುರ್ಚಿ ಕದನ ಶುರುವಾಗಿದೆ. ಹೊಸ ಚೇರ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ವೈದ್ಯಾಧಿಕಾರಿ ಕಳೆದ 11 ದಿನಗಳಿಂದ ನೆಲದ ಮೇಲೆ ಕುಳಿತು ರೋಗಿಗಳ ತಪಾಸಣೆ ಮಾಡುತ್ತಿದ್ದಾರೆ. ಇದು ರೋಗಿಗಳ ಕುತೂಹಲಕ್ಕೆ ಜತೆಗೆ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ.
ಕೊಪ್ಪಳ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ದೇವೇಂದ್ರಾಚಾರ್ ನೆಲದ ಮೇಲೆ ಕುಳಿತು ರೋಗಿಗಳ ತಪಾಸಣೆ ಮಾಡುತ್ತಿದ್ದಾರೆ. ತಮಗೆ ಹೊಸ ಕುರ್ಚಿ ನೀಡಿಲ್ಲ ಎಂದು ಕಳೆದ 11 ದಿನಗಳಿಂದ ಜಿಲ್ಲಾಸ್ಪತ್ರೆಯ ಕೊಠಡಿಯಲ್ಲಿ ನೆಲದ ಮೇಲೆ ಕುಳಿತು ತಪಾಸಣೆ ಮಾಡುತ್ತಿದ್ದಾರೆ. ಈ ಮೂಲಕ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಎಸ್. ಲೋಕೇಶ್ ಅವರ ಮೇಲಿರುವ ಅಸಮಾಧಾನ ಹೊರ ಹಾಕುತ್ತಿದ್ದಾರೆ.
ಇತ್ತೀಚಿಗೆ ಜಿಲ್ಲಾಸ್ಪತ್ರೆಗೆ ಹೊಸ ಕುರ್ಚಿಗಳನ್ನು ತರಿಸಲಾಗಿದೆ. ಎಕ್ಸಿಕ್ಯೂಟಿವ್ ಚೇರ್ಗಳನ್ನು ಕೊಡುವಂತೆ ಮನವಿ ಮಾಡಲಾಗಿತ್ತು. ಆದ್ರೆ, ಹೊಸ ಚೇರ್ಗಳನ್ನು ಬೇರೆ ಸಿಬ್ಬಂದಿಗೆ ನೀಡಿದ್ದಾರೆ. ನಾನೂ ಕುರ್ಚಿ ಕೇಳಿದರೆ ಅಸಂಬದ್ಧವಾಗಿ ಮಾತನಾಡಿದ್ದಾರೆ. ಹೀಗಾಗಿ, ನೆಲದ ಮೇಲೆ ಕುಳಿತು ತಪಾಸಣೆ ಮಾಡುತ್ತಿದ್ದೇನೆ ಎನ್ನುತ್ತಾರೆ ಡಾ. ದೇವೇಂದ್ರಾಚಾರ್.
ಅವರು ಕೇಳಿದಂತೆ ಕುರ್ಚಿ ಕೊಡಲಾಗಿದೆ. ಆದರೂ, ಯಾಕೆ ಹೀಗೆ ಮಾಡುತ್ತಿದ್ದಾರೆ ಎನ್ನು ಅಂತ ಗೊತ್ತಾಗುತ್ತಿಲ್ಲ ಎನ್ನುತ್ತಾರೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಲೋಕೇಶ್.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.