ಗಂಗಾವತಿ ಸಕ್ಕರೆ ಕಾರ್ಖಾನೆ ಪುನಾರಂಭ: ಗಣ್ಯರ ಜತೆ ಚರ್ಚೆ
ಗಂಗಾವತಿ: ತಾಲೂಕಿನ ಮರಳಿ ಗ್ರಾಮದ ಹತ್ತಿರವಿರುವ ಗಂಗಾವತಿ ಸಕ್ಕರೆ ಕಾರ್ಖಾನೆ ಪುನರಾರಂಭಿಸಲು ಅಮೆರಿಕಾದ ಇಎಂಎನ್ ಕಂಪನಿ ಮುಂದೆ ಬಂದಿದ್ದು, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವಿಶಾಲ್ ಚಿಪ್ಕರ್ ಸ್ಥಳೀಯ ಸಂಘ-ಸಂಸ್ಥೆಯ ಪ್ರಮುಖರ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಶಾಲ್ ಚಿಪ್ಕರ್, ಕಾರ್ಖಾನೆ ಪುನರಾಂಭಿಸಲು ನಿರ್ಧರಿಸಿದ್ದು, ಈ ಭಾಗದ ರೈತರಿಗೆ ಕಬ್ಬು ಬೆಳೆಯಲು ಬ್ಯಾಂಕ್ನಿಂದ ಸೌಲ ಸೌಲಭ್ಯ ದೊರಕಿಸುವ ಕುರಿತು ಚರ್ಚಿಸಲಾಗುತ್ತಿದೆ ಎಂದರು. ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರ ನೀಡಿದರೆ ತ್ವರಿತಗತಿಯಲ್ಲಿ ಕಾರ್ಖಾನೆ ಪ್ರಾಂಭಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಸಿಬಿಎಸ್ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಸಿದ್ದಾಪುರ, ಹೊಸಕೇರಿ ಪ್ರಭಾಕರ, ದೊಡ್ಡಯ್ಯ ಜನಾದ್ರಿ, ಮುಷ್ಠಿ ವಿರೂಪಾಕ್ಷಪ್ಪ ಇನ್ನಿತರರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.