ಸುಪ್ರೀಂ ಸಂಚಾರಿ ಪೀಠ ಹೋರಾಟಕ್ಕೆ ಸನ್ನದ್ಧರಾಗಿ: ಬಿ.ಡಿ. ಹಿರೇಮಠ ಕರೆ
ಗಂಗಾವತಿ: ರಾಜ್ಯದಲ್ಲಿ ಸುಪ್ರೀಂಕೋರ್ಟ್ ಸಂಚಾರಿ ಪೀಠದ ಸ್ಥಾಪನೆ ಹೋರಾಟಕ್ಕೆ ಸನ್ನದ್ಧರಾಗಿ ಎಂದು ಧಾರವಾಡ ಹೈಕೋರ್ಟ್ ಸಂಚಾರಿ ಪೀಠದ ವಕೀಲರ ಸಂಘದ ಅಧ್ಯಕ್ಷ ಬಿ.ಡಿ. ಹಿರೇಮಠ ಹೇಳಿದರು.
ನಗರದ ಶ್ರೀರಾಮುಲು ಸ್ಮಾರಕ ಕಲಾ ಮಹಾವಿದ್ಯಾಲಯದಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಏರ್ಪಡಿಸಿದ್ದ ದಕ್ಷಿಣ ಭಾರತಕ್ಕೆ ಸುಪ್ರೀಂಕೋರ್ಟ್ ಪೀಠ ಎನ್ನುವ ರಾಷ್ಟ್ರೀಯ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಧಾರವಾಡದಲ್ಲಿ ಹೈಕೋರ್ಟ್ ಸಂಚಾರಿ ಪೀಠದ ಸ್ಥಾಪನೆಗೆ ನಿರಂತರ ಹೋರಾಟ ಮಾಡಿದ್ದರ ಫಲವಾಗಿ ಪೀಠ ಸ್ಥಾಪನೆಯಾಗಿದೆ. ಬೆಂಗಳೂರಿನಲ್ಲಿ ಸುಪ್ರೀಂಕೋರ್ಟ್ ಸ್ಥಾಪನೆಯಾಗಬೇಕಾದರೆ ನಿರಂತರ ಹೋರಾಟ ಅವಶ್ಯ ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜೋಗದ ಹನುಮಂತಪ್ಪ ನಾಯಕ ಮಾತನಾಡಿ, ಸುಪ್ರೀಂಕೋರ್ಟ್ಗೆ ಹೋಗಲು ಸಾಮಾನ್ಯ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಎಲ್ಲರೂ ಹೋರಾಟ ನಡೆಸಿದರೆ ಬೆಂಗಳೂರಿನಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆಯಾಗಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ. ಎ. ಸೋಮರಾಜು, ಸಿ.ಎಚ್. ನಾರಿನಾಳ, ಎಫ್.ಎಚ್. ಚಿತ್ರಗಾರ, ಹೇಮಲತಾ ಸುರೇಶ, ಶರಣೇಗೌಡ, ಎನ್.ಜಿ. ಕಾರಟಗಿ ಇನ್ನಿತರರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.