ಹಳ್ಳಕ್ಕೆ ನೀರು ಬಿಡುಗಡೆ: ಅಕ್ರೋಶ
ಗಂಗಾವತಿ: ತಾಲೂಕಿನ ಚಿಕ್ಕಡಂಕನಕಲ್ ಗ್ರಾಮದ ಬಳಿ ಇರುವ ತುಂಗಭದ್ರಾ ಎಡದಂಡೆ ಕಾಲುವೆಯ ಎಸ್ಕೇಪ್ ಗೇಟ್ನಿಂದ ಹಳ್ಳಕ್ಕೆ ನೀರು ಬಿಡುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಎಸ್ಟಿ ಘಟಕದ ಉಪಾಧ್ಯಕ್ಷ ಯಮನೂರಪ್ಪ ನಾಯಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲುವೆ ಎಸ್ಕೇಪ್ ಗೇಟ್ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಲುವೆಯ ನೀರನ್ನು ಹಳ್ಳಕ್ಕೆ ಬಿಟ್ಟು ರೈತರಿಗೆ ಅಧಿಕಾರಿಗಳು ಅನ್ಯಾಯ ಮಾಡುತ್ತಿದ್ದಾರೆ. ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.
ಮೂವರು ಮಟ್ಕಾ ಬುಕ್ಕಿಗಳ ಗಡಿಪಾರು
ಗಂಗಾವತಿ: ಮಟ್ಕಾ ಜೂಜಾಟದಲ್ಲಿ ನಿರತರಾಗಿರುವ ತಾಲೂಕಿನ ಸಿದ್ದಾಪುರ ಗ್ರಾಮದ ಮೂವರು ಬುಕ್ಕಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆಂದು ಡಿವೈಎಸ್ಪಿ ಬಾಲವತ್ತಿ ತಿಳಿಸಿದರು. ತಮ್ಮ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಟ್ಕಾ ಜೂಜಾಟದಲ್ಲಿ ತೊಡಗಿರುವ ಸಿದ್ದಾಪುರ ಗ್ರಾಮದ ವೀರೇಶಪ್ಪ ಸಿದ್ದಾಪುರ ಹಾಗೂ ಸಣ್ಣ ಸಿದ್ದಪ್ಪ ಉಪ್ಪಾರ್ ಈಳಗನೂರು ಅವರನ್ನು ಮೂರು ತಿಂಗಳ ಕಾಲ ಹಾಗೂ ಬಸವರಾಜ ಸಿದ್ದಾಪುರ ಎಂಬಾತನನ್ನು ಒಂದು ತಿಂಗಳ ಕಾಲ ಕೊಪ್ಪಳ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಲಾಗಿದೆ. ಈಶಪ್ಪ ಸಿದ್ದಾಪುರ, ಶ್ರೀನಿವಾಸ ಇಡಪುಗುಂಟೆ, ಸಾಲುಂಚಿಮರ ಎಂಬಿಬ್ಬರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು. ಗ್ರಾಮೀಣ ಠಾಣೆಯ ಸಿಪಿಐ ಉಜ್ಜನಕೊಪ್ಪ, ಪಿಎಸ್ಐ ಶರಣಗೌಡರ್ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.