ಕೊಪ್ಪಳ

ಕ್ಷೌರದಂಗಡಿ ಆರಂಭಕ್ಕೆಆಗ್ರಹ

ಗಂಗಾವತಿ: ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಒಂದು ತಿಂಗಳಿನಿಂದ ದಲಿತರು ಮತ್ತು ಕ್ಷೌರಿಕರ ನಡುವೆ ನಡೆದ ವಿವಾದದಿಂದಾಗಿ ಕ್ಷೌರಿಕರು ಅಂಗಡಿಯನ್ನು ಮುಚ್ಚಿದ್ದು, ಈಗ ಪುನಃ ಪ್ರಾರಂಭಿಸ ಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ದಲಿತರು ಪ್ರತಿಭಟನೆ ನಡೆಸಿದರು. ನಗರದ ಸಿಐಟಿಯು ಕಚೇರಿಯಿಂದ ಶ್ರೀಕೃಷ್ಣದೇವರಾಯ ವೃತ್ತದವರೆಗೂ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೂಡಲೆ ಕ್ಷೌರಿಕ ಅಂಗಡಿಗಳನ್ನು ಪ್ರಾರಂಭಿಸಿ ದಲಿತರಿಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಆಗ್ರಹಿಸಿದರು. ದಲಿತರಿಗೆ ಅವಕಾಶ ನೀಡ ಬೇಕೆಂಬ ಕಾರಣಕ್ಕೆ ಕ್ಷೌರಿಕರು ಅಂಗಡಿಗಳನ್ನು ಪ್ರಾಂಭಿಸದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಪ್ರತಿಭಟನಾಕಾರರು ದೂರಿದರು. ಕ್ಷೌರಿಕ ಅಂಗಡಿಗಳನ್ನು ಪ್ರಾರಂಭಿಸದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು. ಎ. ಹುಲಗಪ್ಪ, ಜಿ. ನಾಗರಾಜ, ನಿರುಪಾದಿ, ಅಂಜನಮ್ಮ ಭಾಗವಹಿಸಿದ್ದರು.

ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ:  ಕೆನರಾ ಬ್ಯಾಂಕ್, ದೇಶಪಾಂಡೆ ರುಡ್‌ಸೆಟ್ ಸಂಸ್ಥೆ ಹಳಿಯಾಳ ಇವರು ಜು. 21ರಿಂದ 45 ದಿನಗಳ ದೈಹಿಕ ಅಂಗವಿಕಲರಿಗಾಗಿ ಬೆಸಿಕ್ ಕಂಪ್ಯೂಟರ್ ಮತ್ತು ಆಫೀಸ್ ಮ್ಯಾನೇಜಮೆಂಟ್ ತರಬೇತಿ ಹಾಗೂ ಜು. 22ರಿಂದ ಒಂದು ತಿಂಗಳ ದ್ವಿ-ಚಕ್ರವಾಹನ ರಿಪೇರಿ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, 18ರಿಂದ 45 ವರ್ಷದೊಳಗಿನ ರಾಜ್ಯದ ಯಾವುದೇ ಭಾಗದ ಆಸಕ್ತ ಯುವಕರು ತರಬೇತಿಯಲ್ಲಿ ಭಾಗವಹಿಸಬಹುದು. ಅರ್ಜಿ ಸಲ್ಲಿಸಲಿಚ್ಛಿಸುವವರು ತಮ್ಮ ಸ್ವವಿವರವುಳ್ಳ ಮಾಹಿತಿಯನ್ನು ಜೊತೆ ಪಡೆಯಲಿಚ್ಛಿಸುವ ತರಬೇತಿಯ ಹೆಸರನ್ನು ಬಿಳಿ ಹಾಳೆಯಲ್ಲಿ ಬರೆದು ನಿರ್ದೇಶಕರು, ದೇಶಪಾಂಡೆ ರುಡ್‌ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾನಗರ, ಹಳಿಯಾಳ-581329 ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08284-220807, 9482188780, 9483485489ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ