ಮನಿರಾಬಾದ್: ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಅವರ ಆದೇಶದ ಮೇರೆಗೆ ಭಾನುವಾರದಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯಲ್ಲಿ ಕುಡಿಯುವ ನೀರಿನ ಸಲುವಾಗಿ ಕಾಲುವೆಯಲ್ಲಿ ನೀರನ್ನು ಹರಿಸಲಾಗುವುದು ಎಂದು 'ಕನ್ನಡಪ್ರಭ'ಕ್ಕೆ ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುನಿರಾಬಾದ್ನ ನೀರಾವರಿ ಇಲಾಖೆಯ ಮುಖ್ಯ ಅಭಿಯಂತ ಮಲ್ಲಿಕಾರ್ಜುನ ಗುಂಗಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ನೀರು ಹರಿಸುವ ವಿಷಯವನ್ನು ಖಚಿತಪಡಿಸಿದ್ದಾರೆ.