ಯಲಬುರ್ಗಾ: ತಾಲೂಕಿನ ಯರೇಹಂಚಿನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ವಿದ್ಯಾರ್ಥಿಗಳ ಶೌಚಾಲಯ ಉಪಯೋಗಕ್ಕೂ ಮುನ್ನವೇ ನಿರುಪಯುಕ್ತವಾಗಿದೆ. ಎಸ್‌ಡಿಎಂಸಿ ಆಡಳಿತ ಮಂಡಳಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಅರ್ಧ-ಮರ್ಧ ಮಾಡುವ ಮೂಲಕ ಬಿಲ್ಲು ಎತ್ತುವಳಿ ಮಾಡಿಕೊಂಡಿದ್ದಾರೆ. ಈ ಕುರಿತು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದರೂ ಇದುವರೆಗೊ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಲ್ಲಿಯ ವಿದ್ಯಾರ್ಥಿನಿಯರು ಶೌಚಕ್ಕಾಗಿ ರಸ್ತೆಯನ್ನು ಅವಲಂಬಿಸಿದ್ದಾರೆ. ಇದರಿಂದ ವಿದ್ಯಾರ್ಥಿನಿಯರಿಗೆ ನಿತ್ಯ ಸಂಕಷ್ಟ ಹೇಳತೀರದಾಗಿದೆ. ಕೂಡಲೇ ಆಡಳಿತ ಮಂಡಳಿ ಎಚ್ಚೆತ್ತುಕೊಂಡು ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳ ನೇತೃತ್ವದಲ್ಲಿ ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ವಿದ್ಯಾರ್ಥಿ ಸಂಘಟನೆ ಮುಖಂಡರು ಎಚ್ಚರಿಸಿದ್ದಾರೆ.