ಕೊಪ್ಪಳ

ಸವಳಕ್ಯಾಂಪ್‌ಗೆ ಸೌಲಭ್ಯ ಒದಗಿಸಿ

ಗಂಗಾವತಿ: ಹೊಸಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸವಳಕ್ಯಾಂಪ್‌ನಲ್ಲಿ ಸುಮಾರು 30 ವರ್ಷಗಳಿಂದ ಯಾನಾದಿ ದಲಿತ ಕುಟುಂಬಗಳು ವಾಸಿಸುತ್ತಿರುವ ಓಣಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಅಲ್ಲಿನ ಭೂ-ಮಾಲೀಕ ವರ್ಗ ಕಿರುಕುಳ ನೀಡುತ್ತಿದ್ದು, ಮೂಲಭೂತ ಸೌಕರ್ಯಗಳೂ ಇಲ್ಲ. ಕೂಡಲೇ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಈ ಬಗ್ಗೆ ಗಮನ ನೀಡಬೇಕು ಎಂದು ಭಾರತ ಕಮ್ಯೂನಿಷ್ಟ ಪಕ್ಷ (ಮಾರ್ಕ್ಸ್‌ವಾದಿ-ಲೆನಿನ್‌ವಾದಿ) ಲಿಬರೇಷನ್ ಪ್ರಧಾನ ಕಾರ್ಯದರ್ಶಿ ಬಸವರಾಜ ಒತ್ತಾಯ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾನವಹಕ್ಕುಗಳ ಆಯೋಗಕ್ಕೆ ಪಿಯುಸಿಎಲ್ ದೂರು ನೀಡಿದ್ದರ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷೀಯ ಮಂಡಳಿ ಸದಸ್ಯ ನ್ಯಾಯಮೂರ್ತಿ ಸಿ.ಜೆ. ಹುನಗುಂದ ಸ್ಥಳ ಪರಿಶೀಲನೆ ಮಾಡಿ ಕ್ಯಾಂಪಿನ ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಕೊಪ್ಪಳ ಜಿಲ್ಲಾಧಿಕಾರಿಗೆ ಸೂಚಿಸಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಅಲ್ಲದೇ ದಲಿತರಿಗೆ ಭೂ-ಮಾಲೀಕರಿಂದ ಇನ್ನೂ ಕಿರುಕುಳ ಹೆಚ್ಚಾಗುತ್ತಿದೆ.
ಸವಳಕ್ಯಾಂಪ್ ಗ್ರಾಮ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಬರುವುದರಿಂದ ಇಲ್ಲಿನ ಶಾಸಕರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ದಲಿತರಿಗೆ ಬೆಂಬಲಿಸದೇ ಸವರ್ಣೀಯರಿಗೆ ಬೆಂಬಲಿಸುತ್ತಿದ್ದಾರೆ.
ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಸವಳಕ್ಯಾಂಪ್‌ಗೆ ಭೇಟಿ ನೀಡಿ ಅಲ್ಲಿನ ದಲಿತರ ಸ್ಥಿತಿಗತಿ ಮನಗಂಡು ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಸಿಪಿಐಎಂಎಲ್, ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಪಿಯುಸಿಎಲ್ ಸಂಘಟನೆಗಳೊಂದಿಗೆ ಜಿಲ್ಲಾದ್ಯಂತ ಸಚಿವರ ಹಾಗೂ ಸರ್ಕಾರದ ವಿರುದ್ಧ ಉಗ್ರ ಚಳವಳಿ ನಡೆಸಿಲಿವೆ ಎಂದು ಬಸವರಾಜ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ