ಗಂಗಾವತಿ: ತಾಲೂಕಿನ ಸುಳೆಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಂಜೂರಾದ ಪಠ್ಯ ಪುಸ್ತಕ, ಸಮವಸ್ತ್ರ ಹಾಗೂ ಸಸಿಗಳ ವಿತರಣೆ ಕಾರ್ಯಕ್ರಮ ಜರುಗಿತು.
ಗ್ರಾಮದ ಶಿವಾನಂದಯ್ಯ ತಾತ ವಿರ್ದ್ಯಾಥಿಗಳಿಗೆ ಸಮವಸ್ತ್ರ ವಿತರಿಸಿ ಸರ್ಕಾರದ ಸೌಲಭ್ಯಗಳನ್ನು ಉಪ ಯೋಗಿಸಿಕೊಂಡು ಶಿಕ್ಷಣದಿಂದ ವಂಚಿತರಾಗದೆ ಗ ುಣಮಟ್ಟದ ಶಿಕ್ಷಣ ಪಡೆಯಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯ ಭೀಮರೆಡ್ಡಿ ಚೆಕೋಟಿ ಮಾತನಾಡಿ, ಮಕ್ಕಳು ಶಾಲೆ ಸೇರಿದಂತೆ ತಮ್ಮ ತಮ್ಮ ಮನೆಗಳ ಮುಂದೆ ಸಸಿಗಳನ್ನು ನೆಡುವ ಮ ೂಲಕ ಪರಿಸರ ಕಾಪಾಡಬೇಕು. ಮಗುವಿಗೊಂದು ಮರ, ಶಾಲೆಗೊಂದು ವನ ಎನ್ನುವಂತೆ ಮಕ್ಕಳು ಪರಿಸಜ್ಞಾನ ಬೆಳೆಸಿಕೊಳ್ಳಬೇಕೆಂದರು. ಈ ವೇಳೆ ಎಸ್ಡಿಎಂಸಿ ಅಧ್ಯಕ್ಷ ಸಣ್ಣ ಕನಕಪ್ಪ, ಶಿಕ್ಷಕರಾದ ಶಿವನಗೌಡ, ಮೈಲಾರಪ್ಪ, ಶಕುಂತಲಾ, ವನಿತಾ, ಶ್ರುತಿ, ವಿಜಯಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.