ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಅಭಿವೃದ್ಧಿ ಕಡೆಗಣಿಸಿದ ಬಿಜೆಪಿ ಸರ್ಕಾರ: ನಾಗರಾಜಪ್ಪ

Parashurama
Updated On : 1 Feb 2013, 10:17 am

ಪಾಂಡವಪುರ: ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಜನಪರ ಯೋಜನೆಗಳನ್ನು ನೀಡಿ ಜನತೆಗೆ ಸಾಮಾಜಿಕ ನ್ಯಾಯ ಒದಗಿಸಿದರು. ಅದರೆ, ಅವರ ಅಭಿವೃದ್ಧಿ ಕಾರ್ಯವನ್ನು ನಿರ್ಲಕ್ಷಿಸಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಅಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಮೈಷುಗರ್ ಕಾರ್ಖಾನೆ ಮಾಜಿ ಅಧ್ಯಕ್ಷ ನಾಗರಾಜಪ್ಪ ಆರೋಪಿಸಿದರು.
ಪಟ್ಟಣದಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕರ್ನಾಟಕ ಜನತಾ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಕಳೆದ 60 ವರ್ಷಗಳಿಂದ ಯಾವುದೇ ಸರ್ಕಾರ ಮಾಡದ ಜನಪರ ಕೆಲಸಗಳನ್ನು ಕೇವಲ ಮೂರುವರೆ ವರ್ಷದಲ್ಲಿ ಮಾಡಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದವರು ಬಿ.ಎಸ್. ಯಡಿಯೂರಪ್ಪ. ಅವರ ಅಭಿವೃದ್ಧಿ ಕೆಲಸ, ಏಳಿಗೆ ಸಹಿಸದ ಕೆಲವರು ಕುತಂತ್ರ ನಡೆಸಿ ಅವರ ಅಧಿಕಾರ ಮೊಟಕುಗೊಳಿಸಿದರು ಎಂದರು.
ಕೆಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಅರ್. ಕುಮಾರಸ್ವಾಮಿ ಮಾತನಾಡಿ, ಪಕ್ಷದ ಸಿದ್ಧಾಂತ ಹಾಗೂ ಸಂಘಟನೆ ವಿಚಾರದ ಬಗ್ಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಕೆಜೆಪಿ ರಾಜ್ಯ ಉಪಾಧ್ಯಕ್ಷ ಪ್ರೇಮಯುವರಾಜ್, ಸಿದ್ದೇಗೌಡ, ದೇವಪ್ಪ, ತಾಲೂಕು ಕೆಜೆಪಿ ಅಧ್ಯಕ್ಷ ಮಂಜುನಾಥ್, ಎಂ.ಎಸ್. ಪ್ರಧಾನ ಕಾರ್ಯದರ್ಶಿ ಸುಮನ್, ಅನಿಲ್‌ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷರಾದ ನಂದಿನಿ ಜಗದೀಶ್, ಕಾರ್ಯದರ್ಶಿ ವಡ್ಡರಹಳ್ಳಿ, ಸತೀಶ್, ಸಚಿನ್ ಇತರರು ಇದ್ದರು. ನಾಗರಾಜಪ್ಪ ಅವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಎಂ.ಎಸ್. ಮಂಜುನಾಥ್ ಅವರಿಗೆ ಪಕ್ಷದ ಬಾವುಟ ನೀಡಿ ಕೆಜೆಪಿ ನೂತನ ಅಧ್ಯಕ್ಷರಾಗಿ ನೇಮಕ ಮಾಡಿದರು. ಹೊಸದಾಗಿ ನೂರಾರು ಜನರಿಗೆ ಸದಸ್ಯತ್ವ ನೋಂದಣಿ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments