ಕೊತ್ತತ್ತಿಯಲ್ಲಿ ಮೀನುಗಾರರ ಕ್ಷೇಮಾಭಿವೃದ್ಧಿ ಸಂಘ
ಮಂಡ್ಯ: ತಾಲೂಕಿನ ಕೊತ್ತತ್ತಿ ಗ್ರಾಮದಲ್ಲಿ ಗಂಗಾಪರಮೇಶ್ವರಿ ಯುವಕರ ಮೀನುಗಾರರ ಕ್ಷೇಮಾಭಿವೃದ್ಧಿ ಸಂಘವನ್ನು ಗ್ರಾಮದ ಮುಖಂಡ ಪಟೇಲ್ ಕೆ.ಸಿ. ನಾಗರಾಜು ಉದ್ಘಾಟಿಸಿದರು.
ನಂತರ ಮಾತನಾಡಿ, ಸಂಘವನ್ನು ರಾಜಕೀಯವಾಗಿ ಬಳಸಿಕೊಳ್ಳದೇ ಒಗ್ಗಟ್ಟಿನಿಂದ ಸಂಘ ಮತ್ತು ಗ್ರಾಮದ ಅಭಿವೃದ್ಧಿಗೆ ದುಡಿಯಬೇಕು. ಸಂಘದ ಮೂಲಕ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸುಭದ್ರವಾಗಬೇಕು ಎಂದರು.
ಇತ್ತೀಚೆಗೆ ಸಂಘ ತೆರೆಯುವ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಮೀನುಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಇವುಗಳಿಂದ ಹೊರತಾಗಿ ಸಮಾಜಕ್ಕೆ ಒಳಿತು ಮಾಡುವ ಕಾರ್ಯಕ್ರಮ ಹಮ್ಮಿಕೊಂಡು ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಚಂದ್ರಕಲಾ ನಂಜುಂಡಚಾರ್, ಗ್ರಾಪಂ ಅಧ್ಯಕ್ಷೆ ಶಕುಂತಲಾ ಎನ್. ಸಣ್ಣೇಗೌಡ, ವಿದ್ಯಾಗಣಪತಿ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಕೆ.ಎನ್. ಶಿವನಂಜಯ್ಯ, ವಕೀಲ ಎಂ.ಭಾಸ್ಕರ್, ಯ.ಮರಿಯಣ್ಣ, ಸಂಘದ ಅಧ್ಯಕ್ಷ ಈರಣ್ಣ, ಕಾರ್ಯದರ್ಶಿ ಡಿ. ರವಿಸುಂದರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.