ಬಂಡವಾಳಶಾಹಿಗಳಿಗೆ ಅಧಿಕಾರ ಸೀಮಿತ: ಕಲ್ಪನಾ
ಭಾರತೀನಗರ: ಬಂಡವಾಳಶಾಹಿಗಳಿಗೆ ಮಾತ್ರ ಅಧಿಕಾರ ಸೀಮಿತಗೊಳ್ಳುತ್ತಿದೆ ಎಂದು ಶಾಸಕಿ ಕಲ್ಪನಾ ಸಿದ್ದರಾಜು ವಿಷಾದ ವ್ಯಕ್ತಪಡಿಸಿದರು.
ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ವಿಚಾರ ವೇದಿಕೆಯಿಂದ ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಮಡೆಸ್ನಾನ ಕುರಿತು ವಿಚಾರ ಸಂಕಿರಣದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಯ್ದೆಗಳು ಸಮರ್ಪಕವಾಗಿ ಜಾರಿಯಾದಾಗ ಮಾತ್ರ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಸಿಗಲಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವುದರ ಮೂಲಕ ಶಿಕ್ಷಣದಲ್ಲಿ ಮುಂದುವರಿಯಬೇಕು ಎಂದರು.
ಜಿಪಂ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಸುರೇಶ್ ಕಂಠಿ ಮಾತನಾಡಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕತೆಯಲ್ಲಿ ಸದೃಢರಾಗಬೇಕು. ಒಗ್ಗಟ್ಟಿನಿಂದ ಕೂಡಿ ಕಾರ್ಯಸಾಧನೆಗೆ ಮುಂದಾಗಬೇಕೆಂದರು.
ಇದೇ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ರಾಘವೇಂದ್ರ, ಕಬ್ಬಾಳಯ್ಯ ಅವರನ್ನು ಗೌರವಿಸಲಾಯಿತು. ಶಿಕ್ಷಕ ತೊರೆಬೊಮ್ಮನಹಳ್ಳಿ ಮಹದೇವು,ಪಂಚಲಿಂಗಯ್ಯ, ಜಾಗೃತಿ ಚಿತ್ರಕಲಾವಿದ ತೂಬಿನಕೆರೆ ಗೋವಿಂದು, ಕರಡಕೆರೆ ಯೋಗೇಶ್, ಮುಡೀನಹಳ್ಳಿ ತಿಮ್ಮಯ್ಯ, ಗುಡಿಗೆರೆ ಬಸವರಾಜು, ಅಂಬರಹಳ್ಳಿ ಸ್ವಾಮಿ, ಚಂದ್ರಶೇಖರಯ್ಯ ಸೇರಿದಂತೆ ಇತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.