ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ವಿವಿಧ ಬೆಳೆ ಬೆಳೆಯಲು ರೈತರಿಗೆ ಸಲಹೆ

Parashurama
Updated On : 1 Feb 2013, 10:53 am

ಪಿರಿಯಾಪಟ್ಟಣ:  ರೈತರು ಕೇವಲ ಒಂದು ಬೆಳೆ ಬೆಳೆಯುವುದರಲ್ಲೆ ಸೀಮಿತರಾಗಿರದೆ ವಿವಿಧ ಬೆಳೆಗಳನ್ನು ಬೆಳೆಯುವತ್ತ ತೊಡಗಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಜಿಪಂ ಉಪಾಧ್ಯಕ್ಷೆ ಎಂ.ಕೆ. ಸುಚಿತ್ರಾ ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕೃಷಿ ಮಾಹಿತಿ ಆಂದೋಲನ ಕಾರ್ಯಕ್ರಮ ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಗಳ ವತಿಯಿಂದ ರೈತರಿಗೆ ಬೇಕಾದ ಅನೇಕ ಯೋಜನೆಗಳನ್ನು ರೂಪಿಸಲಾಗುತ್ತಿದೆ. ರೈತರು ಅವುಗಳನ್ನು ತಿಳಿದುಕೊಳ್ಳುವುದರೊಂದಿಗೆ ಹೈನುಗಾರಿಗೆ, ತೋಟಗಾರಿಗೆ, ಪಶು ಸಂಗೋಪನೆ ಮತ್ತಿತರ ಚಟುವಟಿಕೆಗಳಲ್ಲಿಯೂ ತೊಡಗುಬೇಕು. ರೈತ ಮಹಿಳೆಯರು ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಾಗಿ ಬರುವುದರಿಂದ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ತಾಪಂ ಅಧ್ಯಕ್ಷ ರವಿ ನಾಯಕ, ಜಿಪಂ ಸದಸ್ಯ ಎಸ್.ಎ. ಶಿವಣ್ಣ, ತಾಪಂ ಸದಸ್ಯರಾದ ರಘುನಾಥ್, ಬಿ.ವಿ. ಅನಿತಾ ಮಾತನಾಡಿದರು.
ವಿಷಯ ತಜ್ಞರಾದ ಹೊಂಬಯ್ಯ, ರಂಗರಾಜ್ ಹಾಗೂ ಕೃಷಿ ವಿಜ್ಞಾನಿ ಅರಸುಮಲ್ಲಯ್ಯ ಕೃಷಿಗೆ ಸಂಬಂಧಿಸಿದ ಮಾಹಿತಿ ನೀಡಿದರು.
ತಾಲೂಕಿನಲ್ಲಿ ಅತಿ ಹೆಚ್ಚು ರಾಗಿ ಬೆಳೆದು ಸಾಧನೆ ಮಾಡಿದ ರೈತರಾದ ರಾಮೇಗೌಡ, ಸ್ವಾಮಿಗೌಡ, ಮೋಗಣ್ಣೇಗೌಡ ಅವರನ್ನು ಸನ್ಮಾನಿಸಲಾಯಿತು.
ವಿವಿಧ ಇಲಾಖೆಗಳ ವತಿಯಿಂದ ರೈತರಿಗೆ ಅನುಕೂಲವಾಗಬಲ್ಲ ಮಾಹಿತಿ ಸಾರುವ ವಸ್ತು ಪ್ರದರ್ಶನ ಏರ್ಪಡಿಸಿತ್ತು. ತಾಪಂ ಸದಸ್ಯರಾದ ರತ್ನಮ್ಮ, ಸರಸ್ವತಿ, ಪ್ರಕಾಶ್, ಗ್ರಾಪಂ ಅಧ್ಯಕ್ಷೆ ಮೀನಾಕ್ಷಮ್ಮ, ಕೃಷಿ ಸಹಾಯಕ ನಿರ್ದೇಶಕ ಕೆ.ರಾಜು, ತಾಂತ್ರಿಕ ಸಹಾಯಕ ರಾಮಕೃಷ್ಣ, ಕೃಷಿ ಅಧಿಕಾರಿಗಳಾದ ಸಂತೋಷ್, ಗಣೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments