ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ದಲಿತರು ಶಿಕ್ಷಣಕ್ಕೆ ಆದ್ಯತೆ ನೀಡಲಿ: ಸುರೇಶ್

Parashurama
Updated On : 3 Feb 2013, 11:44 am

ಭಾರತೀನಗರ: ಡಾ.ಬಿ.ಆರ್. ಅಂಬೇಡ್ಕರ್ ಪತ್ತಿನ ಸಹಕಾರ ಸಂಘದಲ್ಲಿ ನೀಡಲಾಗುವ ಸಾಲವನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕತೆಯಲ್ಲಿ ಸದೃಢರಾಗಬೇಕೆಂದು ಪಶುವೈದ್ಯಾಧಿಕಾರಿ ಡಾ.ಎಂ.ಎಸ್. ಸುರೇಶ್ ತಿಳಿಸಿದರು.
ಸಮೀಪದ ಗೋಪನಹಳ್ಳಿಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು- ನೆರವು ಕಾರ್ಯಕ್ರಮದಲ್ಲಿ ವಿವಿಧ ಗ್ರಾಮಗಳ ಸಂಘದ ಸದಸ್ಯರಿಗೆ ಸಾಲ ವಿತರಿಸಿ ಮಾತನಾಡಿದರು.
ದಲಿತರು ಶಿಕ್ಷಣವಂತರಾಗಿ ಸಂಘಟನೆಯಲ್ಲಿ ತೊಡಗಿ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದಾಗ ಮಾತ್ರ ಸಿಗಬೇಕಾದ ಸೌಲಭ್ಯಗಳು ಸಮರ್ಪಕವಾಗಿ ಸಿಗಲಿವೆ ಎಂದು ಹೇಳಿದರು. ಪುರಸಭೆ ಸದಸ್ಯ ಎಂ.ಐ. ಪ್ರವೀಣ್ ಮಾತನಾಡಿ, ಗೌತಮಬುದ್ದ, ಅಂಬೇಡ್ಕರ್, ಬಸವಣ್ಣ, ಕುವೆಂಪು ಸೇರಿದಂತೆ ಇತರ ಗಣ್ಯರ ಆದರ್ಶ ಮೈಗೂಡಿಸಿಕೊಳ್ಳುವುದರ ಮೂಲಕ ಗುರಿ ತಲುಪಲು ಶ್ರಮ ವಹಿಸಬೇಕೆಂದರು.
ಇದೇ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಸದಸ್ಯರಿಗೆ ಸಾಲ ವಿತರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು ಗ್ರಾಪಂ ಮಾಜಿ ಸದಸ್ಯ ನಾರಾಯಣ್ ವಹಿಸಿದ್ದರು. ಅರವಿಂದ್, ಸಂಘದ ಅಧ್ಯಕ್ಷ ಸಣ್ಣಪ್ಪ, ಅಂದಾನಿ, ಎಸ್‌ಡಿಎಂಸಿ ಸದಸ್ಯ ಮುತ್ತಯ್ಯ, ನಿವೃತ್ತ ಶಿಕ್ಷಕ ಎಸ್. ರುದ್ರಯ್ಯ, ಜಿಪಂ ಮಾಜಿ ಸದಸ್ಯ ಎಚ್. ಹೊಂಬಯ್ಯ, ಕಾರ್ಕಹಳ್ಳಿ ಬಸವರಾಜು, ಮುಖಂಡರಾದ ಮರಿದಾಸಯ್ಯ, ಜಯರಾಮು, ದಾಸಯ್ಯ, ಗೋವಿಂದರಾಜು, ಜೆ.ರಾಜು, ದೇವರಾಜು, ಜಿ.ಎಸ್. ಉಮೇಶ್, ರಘು, ವಿಜಯ್‌ಕುಮಾರ್, ರಮೇಶ್, ಶಿವಕುಮಾರ್, ಪುರುಷೋತ್ತಮ್, ಸತೀಶ್, ರಾಜಣ್ಣ, ವೆಂಕಟಸ್ವಾಮಿ, ವೆಂಕಟೇಶ್, ರಾಮು ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments