ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ರಾಷ್ಟ್ರೀಯ ಯುವ ಪಡೆಗೆ ಅರ್ಜಿ

Parashurama
Updated On : 3 Feb 2013, 11:26 am

ಮಂಡ್ಯ: ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ದೇಶಾದ್ಯಂತ ಯುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಹಾಯಕವಾಗುವಂತೆ ರಾಷ್ಟ್ರೀಯ ಯುವ ಪಡೆ ಎಂಬ ವಿನೂತನ ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರಗಳ ಮೂಲಕ ಅನುಷ್ಠಾನಗೊಳಿಸುತ್ತಿದೆ.
ಈ ಯೋಜನೆಯಡಿ ಯುವಜನರನ್ನು ನೇಮಕ ಮಾಡಿಕೊಂಡು ಅವರಿಗೆ ತರಬೇತಿ ನೀಡುವ ಮೂಲಕ ಅವರು ಗ್ರಾಮೀಣ ಪ್ರದೇಶದ ಯುವ ಜನರನ್ನು ಯುವಕ, ಯುವತಿ, ಮಹಿಳಾ ಮಂಡಳಿಗಳಾಗಿ ಸಂಘಟಿಸುವ ಹಾಗೂ ಅವರನ್ನು ಸಮಾಜಮುಖಿಗಳನ್ನಾಗಿಸುವ ಕಾರ್ಯವನ್ನು ನಿರ್ವಹಿಸಬೇಕಾಗಿದೆ.
ಎಸ್ಸೆಸ್ಸೆಲ್ಸಿ ನಂತರ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್‌ಅನ್ನು ಪೂರ್ಣಗೊಳಿಸಿದವರು ಸಹ ಅರ್ಜಿ ಸಲ್ಲಿಸಲು ಅರ್ಹರು.  ಯೋಜನೆಯ ಅವಧಿಯು 2 ವರ್ಷಗಳಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಭಾವನೆ ಮತ್ತು ಪ್ರವಾಸ ಭತ್ಯೆಯಾಗಿ 2,500 ನೀಡಲಾಗುವುದು.
ಜಿಲ್ಲೆಯ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆ.15 ರೊಳಗೆ ಅರ್ಜಿ ಸಲ್ಲಿಸುವುದು. ಮಾಹಿತಿಗೆ ದೂ.08232- 220839 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments