ಮಂಡ್ಯ

ಇಂದು ಮಹದೇವಪುರದಲ್ಲಿ ಆರೋಗ್ಯ ಉಚಿತ ತಪಾಸಣೆ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಫೆ. 5ರಂದು ಉಚಿತ ಆಯುರ್ವೇದ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಶಿಬಿರದಲ್ಲಿ ಕೆಮ್ಮು, ದಮ್ಮು, ಉಸಿರಾಟ ತೊಂದರೆ ಮುಂತಾದ ಶ್ವಾಸಕ್ಕೆ ಸಂಬಂಧಪಟ್ಟ ಕಾಯಿಲೆ ಮತ್ತು ಸ್ತ್ರೀ ರೋಗ, ವಾತರೋಗ, ಮಂಡಿ ನೋವು, ಕೀಲು ನೋವು ಹಾಗೂ ಇನ್ನಿತರ ಕಾಯಿಲೆಗಳಿಗೆ ತಪಾಸಣೆ ನಡೆಸಿ, ಉಚಿತ ಚಿಕಿತ್ಸೆ ನೀಡಲಾಗುವುದು.
ಶಿಬಿರದಲ್ಲಿ ಆಯುಷ್ ಇಲಾಖೆಯ ತಜ್ಞ, ವೈದ್ಯರು ಭಾಗವಹಿಸಿ  ರೋಗಿಗಳಿಗೆ ಉಚಿತ ಔಷಧಿ ನೀಡುವರು. ಮಹದೇವಪುರ ಹಾಗೂ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕೆ.ಕಾಳೇಗೌಡ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಯಾದ ಡಾ. ಸೀತಾಲಕ್ಷ್ಮಿ ಜಂಟಿ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ