ಮಂಡ್ಯ

ವಿಶ್ವೇಶ್ವರಯ್ಯ ನಾಲೆಗೆ ನೀರು ಹರಿಸಲು ಆಗ್ರಹ

ಪಾಂಡವಪುರ: ಕೆಆರ್‌ಎಸ್ ಜಲಾಶಯದಿಂದ ವಿ.ಸಿ. ನಾಲೆಗೆ ನೀರನ್ನು ತಕ್ಷಣ ಹರಿಸಬೇಕೆಂದು ಆಗ್ರಹಿಸಿ ರೈತ ಸಂಘದ ನಾಯಕ ಕೆ.ಎಸ್. ಪುಟ್ಟಣ್ಣಯ್ಯ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟಿಸಿದರು.
ಸೋಮವಾರ ಪಟ್ಟಣದ ಡಾ. ರಾಜ್‌ಕುಮಾರ್ ವೃತ್ತದಲ್ಲಿ ನೂರಾರು ರೈತ ಸಂಘದ ಕಾರ್ಯಕರ್ತರು ಹಾಗೂ ರೈತರು ಸೇರಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಜಮೀನಿಗೆ ನೀರು ಇಲ್ಲದ್ದರಿಂದ ರೈತರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಕನಿಷ್ಠ ವಿ.ಸಿ. ನಾಲೆಗೆ ನೀರು ಹರಿಸಿದರೆ ಜಾನುವಾರುಗಳಿಗೆ ಮತ್ತು ಜನರಿಗೆ ಕುಡಿಯಲು ನೀರು ಅನುಕೂಲವಾಗಲಿದೆ ಎಂದರು.
ಈಗಾಗಲೇ ಅಂತರ್ಜಲ ಕುಸಿದು ಕೊಳವೆ ಬಾವಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬೋರ್‌ವೆಲ್‌ಗಳು ನೀರಿಲ್ಲದೆ ಬತ್ತಿ ಹೋಗುತ್ತಿವೆ. ಗ್ರಾಮಗಳಲ್ಲಿ ಜನ- ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ ಎಂದು ತಿಳಿಸಿದರು. ಇನ್ನೇನು ಬೇಸಿಗೆ ಪ್ರಾರಂಭವಾಗುತ್ತಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಅದ್ದರಿಂದ ಒಂದು ವಾರದ ಮಟ್ಟಿಗೆ ನಾಲೆಗಳಿಗೆ ನೀರು ಹರಿಸುವಂತೆ ಸರ್ಕಾರವನ್ನು ಪುಟ್ಟಣ್ಣಯ್ಯ ಒತ್ತಾಯಿಸಿದರು.  ಒಂದು ವೇಳೆ ನೀರು ಹರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ಕೃಷಿ ಕ್ಷೇತ್ರವನ್ನು ಸರ್ಕಾರ ಕಡೆಗಣಿಸಿದರೆ ದೇಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ. ದೇಶದಲ್ಲಿ ಕೃಷಿ ಕ್ಷೇತ್ರ ದೊಡ್ಡ ಉದ್ದಿಮೆಯಾಗಿದೆ. ಇದನ್ನು ರಕ್ಷಣೆ ಮಾಡಬೇಕಾದ ಸರ್ಕಾರ ಬಹಳ ಜವಾಬ್ದಾರಿಯಿಂದ ವರ್ತಿಸಬೇಕು ಎಂದರು.  ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಈಗಾಗಲೇ 3 ಸಾವಿರ ಕೈಗಾರಿಕೆ ಉದ್ಯಮಿಗಳ 47 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಆದರೆ, ರೈತರ ಸಾಲವನ್ನು ಏಕೆ ಮನ್ನಾ ಮಾಡುತ್ತಿಲ್ಲ ಎಂದು ಪುಟ್ಟಣ್ಣಯ್ಯ ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಜಿಪಂ ಸದಸ್ಯ ಎ.ಎಲ್. ಕೆಂಪೂಗೌಡ, ಅಮೃತಿ ರಾಜಶೇಖರ್, ಬಿ.ಟಿ. ಮಂಜು, ಹರವು ಪ್ರಕಾಶ್, ಕೆ. ಗೌಡಗೌಡ, ಎಲೆಕೆರೆ ಚಂದ್ರಶೇಖರ್, ನರಸಿಂಹೇಗೌಡ, ಹಾರೋಹಳ್ಳಿ ಲಕ್ಷ್ಮೇಗೌಡ, ಶ್ರೀನಿವಾಸ್, ಡಾಮುಡಹಳ್ಳಿ ಜಯರಾಂ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!