ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

24, 25ರಂದು ಚಂಡಿಕಾ ಹೋಮ (ಸುದ್ದಿ ಸಂಕ್ಷೇಪ)

Parashurama
Updated On : 17 Feb 2013, 12:55 pm

ಮಂಡ್ಯ: ಇಲ್ಲಿನ ಕಾಳಿಕಾಂಬ ಸೇವಾ ಸಮಿತಿ ವತಿಯಿಂದ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಫೆ.24 ಮತ್ತು 25 ರಂದು 7ನೇ ವರ್ಷದ ಚಂಡಿಕಾ ಹೋಮ ಏರ್ಪಡಿಸಲಾಗಿದೆ. ಫೆ.24 ರಂದು ಸಂಜೆ 6 ರಿಂದ ರಾತ್ರಿ 9 ಗಂಟೆವರೆಗೆ, ಫೆ.25 ರಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 12.30ರವರೆಗೆ ಗಣಹೋಮ, ನವಗ್ರಹ ಹೋಮ, ಮೃತ್ಯುಂಜಯ, ದುರ್ಗಾ ಹೋಮ, ರುದ್ರ ಹೋಮ, ಲಕ್ಷ್ಮೀನಾರಾಯಣ ಹೋಮ, ಸುದರ್ಶನ ಹೋಮ, ಚಂಡಿಕಾ ಹೋಮಗಳು ನಡೆಯಲಿವೆ. ನಂತರ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.
ಪುರಸಭೆ ಚುನಾವಣೆ:  ಅರ್ಜಿ ಆಹ್ವಾನ
ಮಳವಳ್ಳಿ: ಮಾರ್ಚ್ 7 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಳವಳ್ಳಿ ಪುರಸಭೆಗೆ ಸ್ಪರ್ಧಿಸಲು ಇಚ್ಛಿಸುವ  ಕಾಂಗ್ರೆಸ್ ಅಭ್ಯರ್ಥಿಗಳು ಫೆ.20ರೊಳಗೆ ತಮ್ಮ ಸ್ವ-ವಿವರಗಳೊಂದಿಗೆ ಅರ್ಜಿಸಲ್ಲಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ತಿಳಿಸಿದ್ದಾರೆ.  ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ನಿಂದ ಸ್ಪರ್ಧಿಸ ಬಯಸುವ ಆಕಾಂಕ್ಷಿಗಳು ನೇರವಾಗಿ ತಮ್ಮ ಸ್ವ ವಿವರವುಳ್ಳ ಅರ್ಜಿ ಕಾಂಗ್ರೆಸ್ ಕಚೇರಿಗೆ ತಲುಪಿಸಿದ್ದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಅಭ್ಯರ್ಥಿಗಳನ್ನು ಆಯ್ಕೆಮಾಡಿ ಪಕ್ಷದ ಬಿ ಫಾರಂ ನೀಡುವುದಾಗಿ ತಿಳಿಸಿದ್ದಾರೆ. ವಿವರಕ್ಕೆ 94489-51338ಕ್ಕೆ  ಸಂಪರ್ಕಿಸಿ.
ಇಂದು ಕಾಂಗ್ರೆಸ್ ಸಭೆ
ಮದ್ದೂರು: ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ 17 ರಂದು ಕಾಂಗ್ರೆಸ್ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಕದಲೂರು ರಾಮಕೃಷ್ಣ ಹೇಳಿದ್ದಾರೆ.
ಪಟ್ಟಣದ ಶಿವಪುರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎಸ್.ಆತ್ಮಾನಂದ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕರಾದ ಎಸ್.ಎಂ.ಶಂಕರ್, ಮಧು ಜಿ.ಮಾದೇಗೌಡ, ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವ ಪಕ್ಷದ ಆಕಾಂಕ್ಷಿತರು, ಮಾಜಿ ಪುರಸಭೆ ಸದಸ್ಯರು, ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಭಾಗವಹಿಸುವರು ಎಂದು ತಿಳಿಸಿದರು.
19ಕ್ಕೆ 'ಕುರುಕ್ಷೇತ್ರ'
ಮಂಡ್ಯ: ಕರ್ನಾಟಕ ರಾಜ್ಯ ಆರಾಧ್ಯ ಯುವಜನ ಸಮಿತಿ ಕಾರ್ಯಕಾರಿ ಮಂಡಳಿ ಪದಾಧಿಕಾರಿಗಳಿಂದ ಫೆ.19 ರಂದು ಪಂಚಾಚಾರ್ಯ ಆರಾಧ್ಯ ಕೃಪಾಪೋಷಿತ ನಾಟಕ ಮಂಡಳಿ ಸಹಯೋಗದಲ್ಲಿ ನಗರದ ನಾಲ್ವಡಿ ಕೃಷ್ಣರಾಜ ಕಲಾಮಂದಿರದಲ್ಲಿ ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ ಎಂಬ ಪೌರಾಣಿಕ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement