ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ವೈರಮುಡಿ ಉತ್ಸವ: ಪೂರ್ವಭಾವಿ ಸಭೆ

Parashurama
Updated On : 17 Feb 2013, 12:54 pm

ಮಂಡ್ಯ: ಮೇಲುಕೋಟೆಯಲ್ಲಿ ಮಾರ್ಚ್ 22ರಂದು ನಡೆಯುವ ವೈರಮುಡಿ ಉತ್ಸವದ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಉತ್ಸವದ ವೇಳೆ ಕುಡಿಯುವ ನೀರು ಹಾಗೂ ಸಾರ್ವಜನಿಕ ಸೌಕರ್ಯಗಳಲ್ಲಿ ಯಾವುದೇ ಲೋಪ ಆಗಬಾರದು. ಮೈಸೂರು ಹಾಗೂ ಹಾಸನದಿಂದ ವೈರಮುಡಿ ಉತ್ಸವಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಈ ನಿಟ್ಟಿನಲ್ಲಿ ಈ ನಗರಗಳಿಂದ ಮೇಲುಕೋಟೆಗೆ ವಿಶೇಷ ಬಸ್ ವ್ಯವಸ್ಥೆ ಮಾಡುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಉತ್ಸವ ಸಂದರ್ಭದಲ್ಲಿ ವಿದ್ಯುತ್ ಅಡಚಣೆ, ಕುಡಿಯುವ ನೀರಿನ ಸರಬರಾಜಿನಲ್ಲಿ ತೊಂದರೆಯಾಗಂತೆ ಸೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಉತ್ಸವದ ವೇಳೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಪಾಂಡವಪುರ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಉಪ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಉತ್ಸವದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಎನ್.ರಾಜಣ್ಣ, ಬಂದೋಬಸ್ತ್‌ಗೆ ಅಗತ್ಯ ಸಲಹೆ ಸೂಚನೆಗಳನ್ನು ಈ ಸಂದರ್ಭದಲ್ಲಿ ನೀಡಿದರು.
ಶಾಸಕ ಸಿ.ಎಸ್.ಪುಟ್ಟರಾಜು, ಮೇಲುಕೋಟೆ ಕಾರ್ಯನಿರ್ವಾಹಕ ಅಧಿಕಾರಿ ವೇಣುಗೋಪಾಲ್, ಜಿಪಂ ಉಪ ಕಾರ್ಯದರ್ಶಿ ಬಿ.ಆರ್.ಪೂರ್ಣಿಮಾ ಸೇರಿದಂತೆ  ಮತ್ತಿತರರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement