ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ
ಲೆಕ್ಕ ಸಹಾಯಕರ ಹುದ್ದೆ ಪರೀಕ್ಷೆ
ಮಂಡ್ಯ: ಕರ್ನಾಟಕ ಲೋಕ ಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಜಿಲ್ಲೆಯಲ್ಲಿ 19 ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ 7344 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ನಗರದ ವಿವಿಧ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ, ಪ್ರೋಬೆಷನರಿ ಐಎಎಸ್ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಹಾಗೂ ಕೆಎಎಸ್ ಅಧಿಕಾರಿ ಶಿವಾನಂದ ಕರಾಳೆ ಭೇಟಿ ನೀಡಿ ಪರಿಶೀಲಿಸಿದರು.
ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ಹಲಗೂರು: ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ನಡೆದಿದೆ. ಬೆಂಗಳೂರು ಎಲೆಕ್ಟ್ರಾನ್ ಸಿಟಿ ವಾಸಿ ಮೂಹಳ್ಳಿರಾಯ ಅಲೆಕ್ಸ್ (29) ಮೃತಪಟ್ಟ ದುರ್ದೈವಿ. ಬೆಂಗಳೂರಿನಿಂದ 60 ಮಂದಿ ಸ್ನೇಹಿತರೊಂದಿಗೆ ಶನಿವಾರ ಅಲೆಕ್ಸ್ ಪ್ರವಾಸಕ್ಕಾಗಿ ಮುತ್ತತ್ತಿಗೆ ಬಂದಿದ್ದರು. ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಸುಳಿಗೆ ಸಿಲುಕಿ ಅಲೆಕ್ಸ್ ಶನಿವಾರ ಮೃತಪಟ್ಟಿದ್ದರು. ಈಜುಗಾರರ ಸಹಾಯದಿಂದ ಶವ ಭಾನುವಾರ ಪತ್ತೆಯಾಗಿದೆ.