ಇ-ಸೇವಾ ಸೌಲಭ್ಯಕ್ಕೆ ಚಾಲನೆ
ಮೇಲುಕೋಟೆ: ಶ್ರೀಚಲುವರಾಯಸ್ವಾಮಿ ದೇವಾಲಯದಲ್ಲಿ ಸೇವೆ ಮಾಡುವ ಭಕ್ತರು ಇನ್ನು ಮುಂದೆ ಅಂತರ್ಜಾಲ ಮೂಲಕ ಸೇವೆಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಆರಂಭಿಸಲಾಯಿತು. ಮಂಡ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯಣ್ಣ ಪಾಂಡವಪುರ ಉಪವಿಭಾಗಾಧಿಕಾರಿ ಡಾ.ಲತಾ ಜಂಟಿಯಾಗಿ ಈ ಸೇವಾ ಸೌಲಭ್ಯವನ್ನು ಉದ್ಘಾಟಿಸಿದರು. ಇನ್ನು ಮುಂದೆ ದೇವಾಲಯದ ಯಾವುದೇ ಸೇವೆಯನ್ನು ಭಕ್ತರು ಆನ್ಲೈನ್ ಮೂಲಕವೇ ಕಾಯ್ದಿರಿಸಬಹುದಾಗಿದೆ. ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ವೇಣುಗೋಪಾಲ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಡ್ಯ ರಮೇಶ್ ರಾಜು, ಪಾರುಪತ್ತೇಗಾರ ನಾಗರಾಜ ಅಯ್ಯಂಗಾರ್ ಹಾಗೂ ಅಧಿಕಾರಿ ವರ್ಗ ವ್ಯವಸ್ಥಾಪನಾ ಸಮಿತಿ ಸದಸ್ಯರು ಭಾಗವಹಿಸಿದ್ದರು.
ಜಲ ಸಂರಕ್ಷಣೆ ಜಾಗೃತಿ ಜಾಥಾ
ಮೇಲುಕೋಟೆ: ಸಮಗ್ರ ಜಲಾನಯನ ನಿರ್ವಹಣೆ ಯೋಜನೆಯಡಿ ಮೇಲುಕೋಟೆಯಲ್ಲಿ ನೀರಿನ ಸಮರ್ಪಕ ಬಳಕೆ, ಪರಿಸರ ಸಂರಕ್ಷಣೆ, ಅಂತರ್ಜಲ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ತಾಲೂಕು ಜಲಾನಯನ ಅಭಿವೃದ್ಧಿ ಇಲಾಖೆ ಹಾಗೂ ಮಂಡ್ಯದ ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆಯ ವತಿಯಿಂದ ಬುಧವಾರ ಜಾಥಾ ನಡೆಸಲಾಯಿತು. ಮೇಲುಕೋಟೆ ಪ್ರಮುಖ ಬೀದಿಗಳಲ್ಲಿ ನಡೆದ ನಡೆದ ಜಾಥಾದಲ್ಲಿ ಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಭಾಗವಹಿಸಿ ನೀರಿನ ಬಳಕೆಯ ಬಗ್ಗೆ ಘೋಷಣೆ ಕೂಗಿ ಜಾಗೃತಿ ಮೂಡಿಸಿದರು. ಜಾಥಾವನ್ನು ಗ್ರಾ.ಪಂ. ಸದಸ್ಯೆ ಮಮತಾಕುಮಾರಿ ಉದ್ಘಾಟಿಸಿದರು. ಕಾರ್ಯಕ್ರಮದ ಸಂಘಟಕರಾದ ಅನಿಲ್ ರಾಜು ಪತ್ರಕರ್ತರೊಂದಿಗೆ ಮಾತನಾಡಿ, ಪ್ರಸಕ್ತ ವರ್ಷದಲ್ಲಿ ಮೇಲುಕೋಟೆ, ಬಳಿಘಟ್ಟ, ನಾರಾಯಣಪುರ, ಮಾಣಿಕ್ಯನಹಳ್ಳಿ ಪಂಚಾಯಿತಿಯ ಆಯ್ದ ಗ್ರಾಮಗಳು ಜಲಾನಯನ ಅಭಿವೃದ್ಧಿ ಯೋಜನೆಗೆ ಆಯ್ಕೆಯಾಗಿದೆ. ಈ ಗ್ರಾಮಗಳಲ್ಲಿ ಕೃಷಿ ಹೊಂಡ, ನಾಲಾಬದು, ಚೆಕ್ ಡ್ಯಾಂ, ಗೋಕಟ್ಟೆ ಇಂತಹ ಹಲವು ಕಾರ್ಯಗಳನ್ನು ಮಾಡಲಾಗುತ್ತಿದೆ. ನೀರಿನ ಬಳಕೆಯ ಬಗ್ಗೆ ಸ್ತ್ರೀಶಕ್ತಿ ಸಂಘಗಳಲ್ಲಿ ಅರಿವು ಮೂಡಿಸಲಾಗುತ್ತದೆ ಎಂದರು. ಐಜಿಎ ಪರಿಣಿತ ಹರ್ಷವರ್ಧನ, ಭಾರತಿ, ಬೋರಯ್ಯ, ಚನ್ನಕೃಷ್ಣ, ತಮ್ಮಣ್ಣಗೌಡ ಮುಂತಾದವರು ಭಾಗವಹಿಸಿದ್ದರು.
ತೋಟದ ಮನೆಗೆ ಬೆಂಕಿ: ಅಪಾರ ನಷ್ಟ
ಕೆ.ಆರ್.ಪೇಟೆ: ಪಟ್ಟಣದ ಜಯನಗರ ಬಡಾವಣೆಯ ಸರ್ಕಾರಿ ಐಟಿಐ ಕಾಲೇಜು ಸಮೀಪವಿರುವ ತೋಟದ ಮನೆಗೆ ಆಕಸ್ಮಿಕ ಬೆಂಕಿ ಬಿದ್ದು 2 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ತಾಲೂಕಿನ ಹೊಸಹೊಳಲು ಗ್ರಾಮದ ಈಶ್ವರ್ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಈ ಘಟನೆ ಸಂಭವಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.